31 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಮನೆ ನಿರ್ಮಾಣಕ್ಕೆ ನಿವೇಶನ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಇಎನ್ಎಲ್ ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಮನೆ(ವಸತಿ) ನಿರ್ಮಾಣ ಯೋಜನೆಯಡಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ(ಸೈಟ್) ಹೊಂದಿದವರು ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 18 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.98,000 ಹಾಗೂ ನಗರ ಪ್ರದೇಶದವರಿಗೆ ರೂ.1.20 ಲಕ್ಷದೊಳಗಿರಬೇಕು. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯ ನೌಕರರಾಗಿರಬಾರದು.
ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಪ.ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5ರಷ್ಟು ಮೀಸಲಾತಿಯನ್ನು ನೀಡಲಾಗುವುದು.
ನಿಗಧಿತ ಅರ್ಜಿಯೊಂದಿಗೆ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಅಥವಾ ಮತದಾರರ ಗುರುತಿನ ಚೀಟಿ, ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‍ಬುಕ್‍ನ ಮೊದಲ ಪುಟದ ಪ್ರತಿ, ನಿರಾಪೇಕ್ಷಣಾ ಪತ್ರ, ಖಾತೆ, ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ದಿನಾಂಕ 15-03-2022 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08375-234408 ನಿಗಮದ ವೆಬ್‍ಸೈಟ್ www.karnataka.gov.in/kmvstdcl ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಸಿಎಂ ಬೊಮ್ಮಾಯಿ

eNEWS LAND Team

ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಆದ್ಯ ಕರ್ತವ್ಯವಾಗಿದೆ: ಬಿ.ಎನ್.ಹೊಸಮನಿ

eNEWS LAND Team

ಹುಬ್ಬಳ್ಳಿಯಲ್ಲಿ ಅಕ್ರಮ ಮದ್ಯದ ಅಮಲು!

eNewsLand Team