24.3 C
Hubli
ಮೇ 26, 2024
eNews Land
ಸುದ್ದಿ

ಗೃಹ ನಿರ್ವಹಣೆಗೆ ಮಹಿಳೆಯರಿಗೆ ಆರ್ಥಿಕ ನೆರವು ಬಜೆಟ್‌ನಲ್ಲಿ ಘೋಷಣೆ: ಸಿಎಂ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ಕೋವಿಡ್ ಮತ್ತು ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಮತ್ತು ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ, ಒಂದು ಕುಟುಂಬ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಆರ್ಥಿಕ ನೆರವು ನೀಡಲಾಗುವುದು ಆಯವ್ಯಯದಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಇದ್ದಾರೆ.

ಪ್ರತೀ ಕುಟುಂಬಕ್ಕೆ ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಬಾರದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಗಳಿಗೆ ಸಹಾಯವಾಗುವ ವಿಶೇಷ ಯೋಜನೆ ಇದೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000, ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿಯನ್ನು ನೋಡಿಕೊಳ್ಳುವ ಮಹಿಳೆಗೆ ನೀಡಲಾಗುತ್ತದೆ. ಸ್ತ್ರೀ ಸಾಮರ್ಥ್ಯದ ಮೊದಲು ಸಹಾಯ ಮಾಡಿ, ಅದನ್ನು ಅನುಷ್ಠಾನಗೊಳಿಸಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ನೀಡಲಾಗುವುದು.

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ
ಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವ ಯೋಜನೆಗಳು ಚಿಂತನೆ ಮಾಡುತ್ತಿವೆ. ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ. ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಮತ್ತು ಓಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ಜೋಡಿಸಿ ಅವರಿಗೆ ಸ್ವಾವಲಂಬಿ ಮಾಡಲು ಎಂಡ್ ಟು ಎಂಡ್ ಅಪ್ರೋಚ್ ವುಳ್ಳ ಕಾರ್ಯಕ್ರಮ ಇದೆ. ಸ್ತ್ರೀ ಸಾಮರ್ಥ್ಯ ಈ ತಿಂಗಳ ಪ್ರಾರಂಭದಲ್ಲಿ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ.

ಬಜೆಟ್‌ಗೆ ಪೂರ್ವಭಾವಿ ಸಿದ್ಧತೆ
ಸಚಿವ ಸಂಪುಟದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನಕ್ಕೆ ದಿನಾಂಕ ಗೊತ್ತು ಮಾಡಲಾಗಿತ್ತು. ಬಜೆಟ್ ಅಧಿವೇಶನವನ್ನು ಫೆ. 17 ನೇ ತಾರೀಖು ಮಾಡುವ ಸಾಧ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ. ಡಿಸೆಂಬರ್ ವರೆಗೆ ನಮ್ಮ ರಾಜ್ಯದ ಆದಾಯವು ಮೂರುಪಟ್ಟು ಹೆಚ್ಚಾ ಗಿದೆ. ಇದನ್ನು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆಗಳನ್ನು ನೀಡಲಾಗಿದೆ. ಜನಪರ ಆಯವ್ಯಯ ನೀಡಲು ತೀರ್ಮಾನಿಸಲಾಗಿದೆ.
ಚುನಾವಣೆ ವಿಶೇಷ ಬಜೆಟ್ ಇರಲಿದೆ. ಅಸ್ಸಾಂ ಹಾಗೂ , ಗುಜರಾತ್ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿವೆ. ಆದರೆ ಘೋಷಣೆ ಬೇರೆ ಅನುಷ್ಠಾನ ಬೇರೆ ಎಂದರು.

ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ

ಪೌಷ್ಟಿಕ ಆಹಾರ ನೀಡಲು ದೊಡ್ಡ ಪ್ರಮಾಣದ ಘೋಷಣೆ ಮಾಡಲಾಗಿದೆ. ತೀವ್ರ, ಮಧ್ಯಮ ಎಂಬ ವರ್ಗೀಕರಣವಿದ್ದು, ತೀವ್ರ ಕೊರತೆಯಿರುವವರಿಗೆ ಆಹಾರವನ್ನೇ ನೀಡುವ ಮಾಧ್ಯಮದ ಕೊರತೆ ಇರುವವರಿಗೆ ನೀಡುವುದು ಅನುಷ್ಠಾನಗೊಳ್ಳುತ್ತಿದೆ. 5- 6 ಜಿಲ್ಲೆಗಳಲ್ಲಿ ಐ.ಎಂ.ಆರ್ ಎಂಎಂ ಕಡಿಮೆಯಾಗಿದೆ, ಅಡನ್ನು ಹೆಚ್ಚಿಸಲು ನಾವು ಚಿಂತನೆ ಮಾಡಿದ್ದೇವೆ. ಜನಸಾಮಾನ್ಯರ ಆರೋಗ್ಯ, ಶಿಕ್ಷಣ, ಉದ್ಯೋಗ ಆರ್ಥಿಕ ನೆರವು, ದುಡಿಯುವ ವರ್ಗಕ್ಕೆ ಹೆಚ್ಚಿನ ಯುವಕರಿಗೆ ಸಹಾಯ ಮತ್ತು ಸ್ತ್ರೀಯರಿಗೆ ಸಹಾಯ ಮಾಡಲಾಗುವುದು.

Related posts

ದಿ.ಶಿವಳ್ಳಿ ಆದರ್ಶ ರಾಜಕಾರಣಿ, ಅಧಿಕಾರ ಇರಲಿ, ಇಲ್ಲದಿರಲಿ, ಜನರ ಕಷ್ಟಗಳಿಗೆ ಸ್ಪಂದಿಸುವ ಜನನಾಯಕ: ಮಾಜಿ ಸಿಎಂ ಸಿದ್ರಾಮಯ್ಯ

eNEWS LAND Team

ಉದಾಸಿ ಹಾಗೂ ಸಜ್ಜನರ ಮೂಡೂರ ಗ್ರಾಮದಲ್ಲಿ ಮತಯಾಚಿಸಿದರು

eNEWS LAND Team

ಗೌರಿ ಲಂಕೇಶ್ ಹತ್ಯೆ: ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

eNewsLand Team