29 C
Hubli
ಮೇ 3, 2024
eNews Land
ಸುದ್ದಿ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರೂ. 273 ಕೋಟಿ ಬಿಡುಗಡೆ : ಸಚಿವ ಜೋಶಿ

ಶೀಘ್ರವೇ ಹುಬ್ಬಳ್ಳಿ ವಿಮಾನ ನಿಲ್ದಾಣದ ಬೃಹತ್ ಸುಧಾರಣಾ ಕಾರ್ಯ

ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಶ್ರೀ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ರೂ. 273 ಕೋಟಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಶ್ರೀ ಪಲ್ಲಾದ ಜೋಶಿಯವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಆತೀದೊಡ್ಡ ನಗರವಾಗಿದ್ದು, ಹಾಗೂ ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್‌ ಸಂಸ್ಥೆಗಳ ಕಾರ್ಯಾರಂಭ ಹಾಗೂ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆಯ ಹಿನ್ನೆಲೆಯಲ್ಲಿ ನಾನು ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ, ಹೆಚ್ಚಳ ರನ್‌ವೇ ವಿಸ್ತೀರ್ಣ, ಆಪ್ತಾನ್ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣಾ ಸುಧಾರಣೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ನಾಗರೀಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಬರೆದ ಪತ್ರಕ್ಕೆ ಉತ್ತರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆ ನಡೆಸಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ ಎಂದೂ ಸಚಿವ ಜೋಶಿ ತಿಳಿಸಿದ್ದಾರೆ.

ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ 20,000 ಚ.ಮಿ. ವಿಸ್ತರಣೆಗೊಳ್ಳಲಿದ್ದು, ಏಕಕಾಲಕ್ಕೆ 1400 ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೋದಲಾಗಿದೆ ಎಂದೂ ಜೋಶಿಯವರು ತಿಳಿಸಿದ್ದಾರೆ.

ಈ ಬೃಹತ್ ವಿಮಾನ ನಿಲ್ದಾಣದ ಸುಧಾರಣೆಗೆ ಹಾಗೂ ಉನ್ನತೀಕರಣ ಕಾರ್ಯ ಪೂರ್ಣಗೊಂಡಾಗ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ದಾರಿಯಾಗುವುದಲ್ಲದೇ ಅಲ್ಲಿಯವರೆಗೆ ದೇಶದ ಇತರ ಮಹತ್ವದ ನಗರಗಳಿಗೆ ವಿಮಾನಗಳ ಆರಂಭಕ್ಕೂ ಪ್ರಯತ್ನಿಸಲಾಗುವುದೆಂದೂ ಕೂಡಾ ಸಚಿವ ಜೋಶಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಈ ಸುಧಾರಣೆಯಿಂದ ಇಡೀ ಉತ್ತರ ಕರ್ನಾಟಕದ ಉದ್ದಿಮೆ ಕೈಗಾರಿಕೆ, ಹಾಗು ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೂ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿನ 3600 ಚದರ ಮೀಟರ್ ಗಾತ್ರದ ಟರ್ಮಿನಲ್ ಕಟ್ಟಡ ಈಗ ಹಾಲಿ ಪ್ರತಿ ವರ್ಷ 5ಲಕ್ಷ ಪ್ರಯಾಣಿಕರ ನಿರ್ವಹಣೆಯ ಒಂದೇ ಸಮಯಕ್ಕೆ 300 ಪ್ರಯಾಣಿಕರಂತೆ ಸಾಮರ್ಥ್ಯ ಹೊಂದಿದ್ದು, ಇದರೊಂದಿಗೆ ಇಪ್ಪತ್ತು ಸಾವಿರ ಚೌರಸ ಮೀಟರ್ ಗಾತ್ರದ 1400 ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯದ 3 ಏರೋಬ್ರಿಜ್ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ಪರಿವರ್ತಿಸುವ ಯೋಜನೆ, ಈಗಿನ 2600X45 ಮಿ. ಗಾತ್ರದ ರನ್‌ ವೇ ಹೆಚ್ಚಳ ಹಾಗೂ ಈಗಿರುವ ಅಪಾನ್ ಗಾತ್ರದ ಹೆಚ್ಚಳ ಸೇರಿದಂತೆ ಸಮಗ್ರವಾಗಿ ನಿಲ್ದಾಣದ ಅಭಿವೃದ್ಧಿ ಮಾಡಲಾಗುವುದೆಂದು ಶ್ರೀ ಜೋಶಿ ವಿವರಿಸಿದ್ದಾರೆ. ಈ ಎಲ್ಲಾ ಸುಧಾರಣಾ ಕಾರ್ಯಗಳು ಮುಗಿದಾಗ ಹುಬ್ಬಳ್ಳಿ ವಿಮಾನ ನಿಲ್ದಾಣ ಅವಳಿ ನಗರದ ಹೆಮ್ಮೆಯಾಗುವುದರಲ್ಲಿ ಸಂದೇಹವಿಲ್ಲವೆಂದು ಕೂಡಾ ಸಂತೋಷ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಸುಧಾರಣಾ ಪ್ರಸ್ತಾವನೆಗೆ ಬೇಗನೇ ಅನುಮತಿ ನೀಡಿ ಬೇಗನೇ ಕಾರ್ಯ ಆರಂಭವಾಗುವಂತೆ ವಿಮಾನ ನಿಲ್ದಾಣ ವಿಸ್ತರಣೆಗೆ ಹಣ ಬಿಡುಗಡೆ ಮಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೂ ಹಾಗೂ ವಿಮಾನಯಾನ ಸಚಿವ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೂ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ವಿಷಯವಾಗಿ ವಿಮಾನಯಾನ ಸಚಿವರೊಂದಿಗೆ ನಿರಂತರ ಸಂರ್ಕದಲ್ಲಿದ್ದು ಆದಷ್ಟು ಬೇಗ ಕಾಮಗಾರಿ ಮುಗಿಸಲು ಪ್ರಯತ್ನಿಸುವುದಾಗಿಯೂ ಹೇಳಿದ್ದಾರೆ.

Related posts

ಅಣ್ಣಿಗೇರಿ ನೀಲಗುಂದ ಪುಣ್ಯಪುರುಷ ಗುದ್ನೇಶ್ವರ ಶ್ರೀಗಳ ಬಗ್ಗೆ ಇನ್ನಷ್ಟು ಓದಿ ತಿಳಿಯಿರಿ. ರಥೋತ್ಸವಕ್ಕೆ ತಪ್ಪದೇ ನಾಳೆ ಬನ್ನಿ…

eNEWS LAND Team

ನಮ್ಮಲ್ಲಿ ಹುಟ್ಟಿದ ಜೈನ ಧರ್ಮ ಜಗತ್ತಿಗೆ ಶಾಂತಿ ಸಂದೇಶ ನೀಡುತ್ತಿದೆ: ಡಾ. ಜಿ. ಪರಮೇಶ್ವರ

eNewsLand Team

ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ

eNewsLand Team