27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ಮೇ 28 ಹುಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

ಇಎನ್ಎಲ್ ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Related posts

ರಂಗಿನಾಟದಲ್ಲಿ ಮಿಂದೆದ್ದ ವಾಣಿಜ್ಯ ನಗರಿ ಹುಬ್ಬಳ್ಳಿ ಸಂಭ್ರಮ ಹೇಗಿತ್ತು ಗೊತ್ತಾ? ಇಲ್ಲಿದೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್

eNEWS LAND Team

ನಾಲ್ಕು ವರ್ಷ ಅಧಿಕಾರ ಮಾಡಿದ್ರೂ ಗುಂಡಿ ಮುಚ್ಚದ ಬಿಜೆಪಿ: ಸಿಎಂ ಸಿದ್ದು

eNewsLand Team

ಖಾಸಗಿ, ಸರ್ಕಾರಿ,ಅರೆ ಸರ್ಕಾರಿ ಉದ್ಯೋಗ ಕನ್ನಡಿಗರಿಗೇ : ಸಿಎಂ ಬೊಮ್ಮಾಯಿ

eNEWS LAND Team