29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಸಿದ್ದರಾಮಯ್ಯ‌ ಗಂಜಿಕೇಂದ್ರ ಹುಡುಕಿ ಹೊರಟಿದ್ದಾರೆ!; ಕೇಂದ್ರ ಸಚಿವ ಜೋಶಿ ಹೀಗೆ ಹೇಳಿದ್ಯಾಕೆ??

ಇಎನ್ಎಲ್ ಹುಬ್ಬಳ್ಳಿ: ಸಿದ್ದರಾಮಯ್ಯ ತಮ್ಮ ಹೊಟ್ಟೆಪಾಡಿಗಾಗಿ ಗಂಜಿ ಕೇಂದ್ರ ಹುಡುಕಿಕೊಂಡು ಹೊರಟಿದ್ದು, ರಾಜಕೀಯ ಪುನರ್ವಸತಿಗಾಗಿ ಆರ್ ಎಸ್ ಎಸ್ ಮೂಲದ ಬಗ್ಗೆ ಪ್ರಶ್ನೆ‌ ಮಾಡುತ್ತ ಟೀಕಿಸುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಳಷ್ಟು ನಾಯಕರು ಅಸಮಾಧಾನಗೊಂಡಿದ್ದಾರೆ. ಮತ್ತೊಮ್ಮೆ ಸಿಎಂ ಆಗಬೇಕೆಂಬ ಭ್ರಮೆಯಲ್ಲಿದ್ದಾರೆ. ಆದರೆ, ಸಿದ್ದರಾಮಯ್ಯ ಹೇಗಾದರೂ ಮಾಡಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯಿಂದ ಆರೆಸ್ಸೆಸ್ ಟೀಕಿಸಿ, ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ ಎಂದರು.
ಆರೆಸ್ಸೆಸ್ ನಿಂದ ನಾವು ಬಂದಿದ್ದರಿಂದ ನಾವು ಅದರ ಬಗ್ಗೆ ಮಾತನಾಡಿದರೆ ನಾವು ಪ್ರತಿಕ್ರಿಯಿಸುತ್ತೇವೆ. ಆರೆಸ್ಸೆಸ್ ಎಂದೂ ಇಂಥದರ ಬಗ್ಗೆ ಪ್ರತಿಕ್ರಿಯಿಸಲ್ಲ. ಇನ್ನು ಮುಂದೆ ಸಿದ್ದರಾಮಯ್ಯ ಅವರ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ ಎಂದರು.

ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಆ ಹಿನ್ನೆಲೆಯಲ್ಲಿ ಆರೆಸ್ಸೆಸ್ ಟೀಕಿಸುತ್ತಿದ್ದಾರೆ. ಇಷ್ಟು ದಿನ ನಾವು ಹಿಂದೂಗಳಲ್ಲ ಎಂದು ಹೇಳುತ್ತಿದ್ದ ಕಾಂಗ್ರೆಸ್ಸಿಗರು ಈಗ ನಾವು ಹಿಂದೂಗಳೆಂದು ಹೇಳಿಕೊಳ್ಳುವ ಸ್ಥಿತಿ ಬಿಜೆಪಿಯಿಂದ ಬಂದಿದ್ದೆ. ಆರೆಸ್ಸೆಸ್ ಸಾಂಸ್ಕೃತಿಕ ಸಂಘಟನೆ. ಈ ಬಗ್ಗೆ ಸಿದ್ದರಾಮಯ್ಯರಿಗೂ ಗೊತ್ತಿದೆ. ಆದರೆ ಪುನರ್ವಸತಿಗಾಗಿ ಅದರ ಬಗ್ಗೆ ಟೀಕಿಸುತ್ತಿದ್ದಾರೆ ಎಂದು ಸಚಿವ ಜೋಶಿ ಲೇವಡಿ ಮಾಡಿದರು.

Related posts

ಗುದದ್ವಾರದ ಒಳಗೆ ಟಾಯ್ಲೆಟ್ ಸ್ಪ್ರಿಂಕ್ಲರ್ ಹಾಕಿಕೊಂಡ ಭೂಪ!! ಅನೈಸರ್ಗಿಕ ಲೈಂಗಿಕ ಕ್ರಿಯೆ??

eNewsLand Team

ಬಿಜೆಪಿ 13 ಆಕಾಂಕ್ಷಿಗಳಿಂದ ಬಂಡಾಯದ ಬಾಂಬ್ ಸ್ಫೋಟ: ಯಾರಿಗೆ ಎಫೆಕ್ಟ್; ?

eNEWS LAND Team

ರಸ್ತೆ ಮಧ್ಯ ಹೋಮ ಮಾಡಿ ಬಿಜೆಪಿ ಮಾನ ಹರಾಜು ಹಾಕಿದ ಕಾಂಗ್ರೆಸ್!!

eNewsLand Team