34 C
Hubli
ಮಾರ್ಚ್ 23, 2023
eNews Land
ಸುದ್ದಿ

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್ ಬಸ್‌ಪಾಸ್ ಸೌಲಭ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ: ಸಿಎಂ

Listen to this article

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ

ಇಎನ್ಎಲ್ ಕಲಬುರಗಿ: ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು,ಬಸ್‌ಪಾಸ್ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‌ನಲ್ಲಿ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ನಿರ್ಧರಿಸಲಾಗುವುದು. ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ. ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ,ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ.ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು. ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ.ಸಮಾಜದ ಒಳಿತಿಗೆ ಅದು ಬಳಕೆಯಾಗಬೇಕು.ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರ್ಕಾರಕ್ಕೆ ಕಳುಹಿಸಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯವಹಿಸಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ , ಶಾಸಕರಾದ ಸುಭಾಷ ಗುತ್ತೇದಾರ, ಡಾ.ಅವಿನಾಶ ಜಾಧವ,ಬಸವರಾಜ ಮತ್ತಿಮುಡ,ಶರಣು ಸಲಗರ,ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಶಿಲ್ ನಮೋಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಮತ್ತಿತರರು ವೇದಿಕೆಯಲ್ಲಿದ್ದರು.

ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ ಮೊದಲ ಮಾತುಗಳನ್ನಾಡಿದರು. ವಿಜಯವಾಣಿ ಸಂಪಾದಕ ಕೆ.ಎನ್.ಚನ್ನೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮಹೇಶ ಬಡಿಗೇರ ಮತ್ತು ತಂಡದ ಕಲಾವಿದರು ಪ್ರಾರ್ಥಿಸಿದರು. ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಎಂ ಠಾಕೂರ ಸ್ವಾಗತಿಸಿ, ಕೆ.ಜಿ.ಬೋಪಯ್ಯ  ನಿರೂಪಿಸಿದರು.

Related posts

ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

eNEWS LAND Team

ನೈಋತ್ಯ ರೈಲ್ವೆ: ಯಾವ ರೈಲು ರದ್ದು? ಮಾರ್ಗ ಬದಲಾವಣೆ, ಇಲ್ಲಿದೆ ಮಾಹಿತಿ

eNEWS LAND Team

ಜಮಾಲಿಗುಡ್ಡದಲ್ಲಿ ಡಾಲಿ ಧನಂಜಯ್, ಶ್ಯಾನೆ ಟಾಪ್ ಹುಡ್ಗಿ ಅದಿತಿ..!

eNewsLand Team