24 C
Hubli
ನವೆಂಬರ್ 30, 2022
eNews Land
ಸುದ್ದಿ

ಬೆಂಬಲ ಬೆಲೆ ಯೋಜನೆ; ಕಡಲೆ ಖರೀದಿ ಕೇಂದ್ರ ಸ್ಥಾಪನೆಗೆ ಆದೇಶ: ಸಚಿವ ಮುನೇನಕೊಪ್ಪ

Listen to this article

ಇಎನ್ಎಲ್ ಧಾರವಾಡ: 2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳನ್ನು ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ರೂ .5230 / -ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಧಾರವಾಡ , ಕೊಪ್ಪಳ , ಬಳ್ಳಾರಿ , ಚಿತ್ರದುರ್ಗ , ಗದಗ , ಬೆಳಗಾವಿ , ವಿಜಯಪುರ , ಕಲಬುರಗಿ , ಯಾದಗಿರಿ , ಬೀದರ್ , ಬಾಗಲಕೋಟೆ , ದಾವಣಗೆರೆ , ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದಂತೆ ನವಲಗುಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಬಾರಿಯಂತೆ ಈ ಸಾಲಿನಲ್ಲಿಯೂ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ.

ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ( ಮಾರ್ಕ್‌ಫೆಡ್‌ ) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಿದೆ .

ಈ ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ .

ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 04 ( ನಾಲ್ಕು ) ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ( ಹದಿನೈದು ) ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳನ್ನು ಖರೀದಿಸತಕ್ಕದ್ದು.ಖರೀದಿ ಕೇಂದ್ರಗಳಲ್ಲಿ ಕಡಲೆಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು. ಎನ್‌ಐಸಿ ಅಭಿವೃದ್ಧಿಪಡಿಸಿರುವ ನೋಂದಣಿ ತಂತ್ರಾಂಶವನ್ನು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ . FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ , UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ . ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಲು ಸಿದ್ದಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ . ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾಫೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು . ನಾಫೆಡ್ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಕಡಲೆಕಾಳು ಖರೀದಿ ಕೇಂದ್ರಗಳಿಂದ ಖರೀದಿಸಬೇಕು.

ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಢ PACS / VSSN / FPO / TXPCMS ಸಂಸ್ಥೆಗಳ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು.

ರೈತರ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಇಲಾಖೆಗಳಲ್ಲಿ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು ಮತ್ತು ಅಂತಹ ಸಿಬ್ಬಂದಿಗಳಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸಬೇಕು.

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯು ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳ ಸಂಖ್ಯೆಯನ್ನು ತೆರೆಯಲು ನಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ನಿರ್ಧರಿಸಬೇಕು.

ರೈತರ ಹೆಸರಿನ ಆಧಾರ್‌ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್‌ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ನೇರ ನಗದು ವರ್ಗಾವಣೆ ಮೂಲಕ ಜಮಾ ಆಗುವಂತೆ ಪಾವತಿಸಬೇಕು.

ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸಬಾರದು. ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು.
ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇಮೇಲ್ ಮೂಲಕ ಸಲ್ಲಿಸಬೇಕು.

ಜಿಲ್ಲಾಧಿಕಾರಿಗಳು ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಬಗ್ಗೆ ಕ್ರಮವಹಿಸಬೇಕು. ಕೋವಿಡ್ -19 ( ನೋವೆಲ್ ಕೊರೋನಾ ವೈರಾಣು ) ನಿಯಂತ್ರಣ ಹಿನ್ನೆಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡಬೇಕು . ಕೇಂದ್ರ / ರಾಜ್ಯ ಸರ್ಕಾರವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವರು ಪ್ರಕಟಣೆಗೆ ತಿಳಿಸಿದ್ದಾರೆ.

Related posts

ಕಲಾ ತವರು ಕಲಘಟಗಿ: ಬಸವರಾಜ ಹೊರಟ್ಟಿ

eNEWS LAND Team

ಚಡ್ಡಿ ಖರೀದಿಗೆ ಹೋಗಿ ಲಕ್ಷ ಕಳೆದುಕೊಂಡ! ಆನ್ಲೈನ್ ಮುಂಡಾಮೋಚ್ತು!!

eNewsLand Team

ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

eNEWS LAND Team