ಇಎನ್ಎಲ್ ಕುಂದಗೋಳ: ವಸತಿ ಯೋಜನೆ ಅಡಿ 250 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ. ಈ ಮೂಲಕ ಶಾಸಕಿ ಕುಸುಮಾವತಿ ಶಿವಳ್ಳಿ ಸಣ್ಣತನ ತೋರಿದ್ದಾರೆ ಎಂಬ ವಿಚಾರ ಕೇಳಿಬಂದಿದೆ.
ಇದನ್ನೂ ಓದಿ:ಹುಬ್ಬಳ್ಳಿ: ಖತರ್ನಾಕ ಕಿಲ್ಲರ್: ಭಿಕ್ಷುಕರೇ ಟಾರ್ಗೆಟ್!!
ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯದ ವಸತಿ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರಕ್ಕೆ ಬಂದರೂ ಅವರನ್ನು ಸೌಜನ್ಯಕ್ಕಾಗಿಯೂ ಕುಸುಮಾವತಿ ಶಿವಳ್ಳಿ ಭೇಟಿ ಆಗಿಲ್ಲ. ಮನೆ ನಿರ್ಮಾಣಕ್ಕೆ ಭೂಮಿ ಪೂಜೆ, ವೇದಿಕೆ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿಲ್ಲ.
ಇದನ್ನೂ ಓದಿ:ನವೀನ್ ಪಾರ್ಥಿವ ಶರೀರ ಸೋಮವಾರ ಬೆಂಗಳೂರಿಗೆ: ಸಿಎಂ ಬೊಮ್ಮಾಯಿ
ವೇದಿಕೆಯಲ್ಲಿ ಮಾತನಾಡಿದ ಸಚಿವ ಸೋಮಣ್ಣ, ರಾಜಕೀಯ ಬೇರೆ, ಅಭಿವೃದ್ಧಿ ಕಾರ್ಯಕ್ರಮ ಬೇರೆ. ಶಾಸಕರಿಗೆ ಕರೆ ಮಾಡಿ ಬರುವಂತೆ ಹೇಳಿದ್ದೆ. ಆದರೆ ಪಾಲ್ಗೊಂಡಿಲ್ಲ. ಕುಸುಮಾವತಿ ರಾಜಕೀಯದಲ್ಲಿ ಇನ್ನೂ ಬೆಳೆಯಬೇಕಾದವರು. ಇಂಥಲ್ಲಿ ಪಕ್ಷ ರಾಜಕೀಯ ಮಾಡಬಾರದು. ಬೇಸರವಾಗಿ ಬಂದಿಲ್ಲ ಎಂದು ಕೇಳಿದ್ದೇನೆ ಎಂದರು.
ಇದನ್ನೂ ಓದಿ:ಅನ್ಯಜಾತೀಯ ಹುಡುಗರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೇ ಹುಷಾರ್!!!
ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಫಿಕ್ಸ್ ಆಗಿದೆ. ಸಚಿವ ಸೋಮಣ್ಣ ತಮ್ಮ ಸ್ವಂತ ಕ್ಷೇತ್ರದಲ್ಲಿ ಇದ್ದ ಕಾರ್ಯಕ್ರಮದ ವೇಳಾಪಟ್ಟಿ ಬದಲಾವಣೆ ಮಾಡಿ ಇಲ್ಲಿಗೆ ಬಂದಿದ್ದಾರೆ ಎಂದು ಪರೋಕ್ಷವಾಗಿ ಕುಸುಮಾವತಿ ಶಿವಳ್ಳಿ ಕುರಿತು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವರನ್ನು ಗಲ್ಲು ಹಾಕಿ ಎಂದು ಆಗ್ರಹ
ಒಟ್ಟಾರೆ ಶಾಸಕರ ಅನುಪಸ್ಥಿತಿ ಕಾರ್ಯಕ್ರಮದಲ್ಲಿ ಎದ್ದು ಕಂಡಿತು. ಕಾಲದ ಕೈಗೆ ಬುದ್ಧಿ ಕೊಡದೆ ಜಾಣ್ಮೆಯ ರಾಜಕಾರಣ ಮಾಡಬೇಕಾದ ಶ್ಯಾಣೆತನವನ್ನು ಕುಸುಮಾವತಿ ಇನ್ನಾದರೂ ತಿಳಿದುಕೊಳ್ಳಬೇಕು ಎಂಬುದು ಕ್ಷೇತ್ರದ ಜನತೆಯ ಅಭಿಮತ.
ಇದನ್ನೂ ಓದಿ:ರೌಡಿಶೀಟರ್ ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಕೊಲೆ!!