28 C
Hubli
ಫೆಬ್ರವರಿ 3, 2023
eNews Land
ಸುದ್ದಿ

ಶ್ರಮಿಕ್ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕ ವಾಹನಕ್ಕೆ ಚಾಲನೆ: ಶ್ರಮಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಎಲ್ಲಿದೆ ನೋಡಿ?

Listen to this article

ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಗೌರವ ಅಧ್ಯಕ್ಷ ಸತೀಶ್ ಭದ್ರಣ್ಣ ನೇಮಕ

ಇಎನ್ಎಲ್ ಹುಬ್ಬಳ್ಳಿ: ಇಲ್ಲಿನ ಹೊಸ ನ್ಯಾಯಾಲಯದಲ್ಲಿ ಇಂದು ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅನುದಾನದಲ್ಲಿ ಸ್ಕೊಡ್ ವೆಸ್ ಸಂಸ್ಥೆ ಸಹಯೋಗದಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಶ್ರಮಿಕ್ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕ ವಾಹನಕ್ಕೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ, ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಆರ್.ಎಸ್. ಚಿನ್ನಣ್ಣವರ, ಸದಸ್ಯ ಕಾರ್ಯದರ್ಶಿ ರಾಜಶೇಖರ ತಿಳಗಂಜಿ ಮತ್ತು ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಚಾಲನೆ ನೀಡಿದರು.

ಕರ್ನಾಟಕದ ರಾಜಧಾನಿ ಯಾವುದು?

ನಂತರ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರ ಮಾತನಾಡಿ, ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರಿಗೆ ಉಚಿತ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಕಾರ್ಮಿಕ ಇಲಾಖೆಯಿಂದ ಶ್ರಮಿಕ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕ ವಾಹನವನ್ನು ಆರಂಭಿಸಲಾಗಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಕಾರ್ಮಿಕರು ಹಾಗೂ ಹೊಸದಾಗಿ ನೋಂದಣಿ ಮಾಡಿಸಿಕೊಂಡಿರುವ ಜಿಲ್ಲೆಯ 15 ಸಾವಿರ ಕಾರ್ಮಿಕರಿಗೆ ಉಚಿತ ಆರೋಗ್ಯ ಸೇವೆ ದೊರೆಯಲಿದೆ. ಈ ವಾಹನವು ಇಸಿಜಿ, ಕೋವಿಡ್-19 ಪರೀಕ್ಷೆ, ಪ್ರಯೋಗಾಲಯ ಪರೀಕ್ಷೆ ಹಾಗೂ ಇಲಾಖೆ ನಿರ್ದೇಶಿತ ಇತರೆ ಆರೋಗ್ಯ ಸೇವೆಗಳನ್ನು ನೀಡಲಿದೆ ಎಂದರು.

ಶರಣ ಹೂಗಾರ ಮಾದಯ್ಯ ಜಯಂತಿ ಹಾಗೂ ಹೂಗಾರ ಸಮಾಜದ ಪ್ರಥಮ ಸಮಾವೇಶ

ಸ್ಕೊಡ್ ವೆಸ್ ಸಂಸ್ಥೆಯ ಧಾರವಾಡ ಘಟಕದ ಯೋಜನಾ ಸಂಯೋಜನಾಧಿಕಾರಿ ಚಂದ್ರಶೇಖರ ಆಚಾರ್ಯ ಬಡಿಗೇರ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಎರಡು ಚಿಕಿತ್ಸಾ ವಾಹನಗಳು ಕಾರ್ಯನಿರ್ವಹಿಸಲಿವೆ. ವೈದ್ಯಾಧಿಕಾರಿ, ಶುಶ್ರೂಷಕಿ, ಪ್ರಯೋಗಾಲಯ ತಜ್ಞರು, ಔಷಧ ವಿತರಣಾ ತಜ್ಞರು, ವೈದ್ಯಕೀಯ ಸಮಾಜ ಕಾರ್ಯಕರ್ತರು, ಚಾಲಕ, ಸಹಾಯಕ ಸಿಬ್ಬಂದಿಯನ್ನು ಘಟಕ ವಾಹನ ಹೊಂದಿರುತ್ತದೆ. ನೋಂದಾಯಿತ ಕಾರ್ಮಿಕರಿಗೆ ಸಿಗುವ ವೈದ್ಯಕೀಯ ಸೌಲಭ್ಯಗಳು ಮತ್ತು ಇತರೆ ಆರೋಗ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯನ್ನು ಸಹ ಒದಗಿಸಲಿದೆ. ಆಧುನಿಕ ಸ್ಟ್ರಚರ್, ಬೆಡ್, ಆಕ್ಸಿಜನ್ ಸಿಲಿಂಡರ್, ಪ್ರಥಮ ಚಿಕಿತ್ಸಾ ಕಿಟ್, ಲ್ಯಾಬ್ ಪರಿಕರಗಳು, ಜೀವನಾವಶ್ಯಕ ಔಷಧಿಗಳು, ಬಿಪಿ ಟೆಸ್ಟ್, ಇಸಿಜಿ ಸೌಲಭ್ಯ, ರೆಫ್ರಿಜರೇಟರ್, ವ್ಹೀಲ್ ಚೇರ್, ಇತರೆ ಪ್ರಯೋಗಾಲಯ ಸಲಕರಣೆಗಳನ್ನು ಹೊಂದಿರುತ್ತದೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರವರೆಗೆ ಹಾಗೂ ಶನಿವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೇವೆಯನ್ನು ನೀಡಲಿದೆ. ಕಾರ್ಮಿಕ ನೋಂದಾಯಿತ ಕಾರ್ಡ್ ಹಾಗೂ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ನ್ಯಾಯಾಧೀಶರಿಗೆ ಚಿಕಿತ್ಸಾ ಘಟಕ ವಾಹನದ ಕುರಿತು ಮಾಹಿತಿ ನೀಡಿದರು.

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತೆ ಎಸ್. ಶ್ವೇತಾ, ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ, ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ್, ಅಕ್ರಮ ಅಲ್ಲಾಪುರ, ಡಾ.ಶಿವಶಂಕರ ನರೇಗಲ್, ಜಿಎನ್ ಎಂ, ಫಾರ್ಮಾಸಿಸ್ಟ್,
ಲ್ಯಾಬ್ ಟೆಕ್ನಿಷಿಯನ್, ವೈದ್ಯಕೀಯ ಸಮಾಜ ಕಾರ್ಯಕರ್ತರು‌, ಆರೋಗ್ಯ ಸಹಾಯಕರು, ವಾಹನ ಚಾಲಕರು, ಹುಬ್ಬಳ್ಳಿ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು, ಹಿರಿಯ ಹಾಗೂ ಕಿರಿಯ ಶ್ರೇಣಿಯ ನ್ಯಾಯಾಧೀಶರು, ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ನಡಕಟ್ಟಿನ ದಂಪತಿಗೆ ತೋಂಟದ ಸಿದ್ಧಲಿಂಗ ಶ್ರೀಗಳ ರಾಜ್ಯ ಪ್ರಶಸ್ತಿ ಹಾಗೂ ಸನ್ಮಾನ

eNEWS LAND Team

ತಲೆ ತಗ್ಗಿಸಿ ನಿನ್ನ ಕೆಲಸ ಮಾಡಿದರೆ ಅದರ ಫಲ ನಿನ್ನನ್ನು ತಲೆ ಎತ್ತುವಂತೆ ಮಾಡುತ್ತದೆ: ಪ್ರಾಚಾರ್ಯ ಬಿರಾದಾರ

eNEWS LAND Team

ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ

eNewsLand Team