35 C
Hubli
ಮಾರ್ಚ್ 28, 2023
eNews Land
ಸುದ್ದಿ

ಡಿ. 18 ರಂದು ಮೆಗಾ ಲೋಕ ಅದಾಲತ್

Listen to this article

ಇಎನ್ಎಲ್ ಧಾರವಾಡ

ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿ. 18 ರಂದು ಶನಿವಾರದಂದು “ಮೆಗಾ ಲೋಕ ಅದಾಲತ್” ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಮೇಶ ಅಡಿಗ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಬ್ಯಾಂಕ್, ಕಾರ್ಮಿಕರು, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

Related posts

“ಪತ್ರಿಕೋದ್ಯಮ ರತ್ನ” ಪ್ರಭುಲಿಂಗಪ್ಪ ರಂಗಾಪೂರ

eNEWS LAND Team

ಕಲಘಟಗಿಯಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆ ಇಲ್ಲ : ಶಾಸಕ ನಿಂಬಣ್ಣವರ

eNEWS LAND Team

ಪುಟಾಣಿಗಳಿಗೆ ಪುಷ್ಪ ನೀಡಿ, ಅಂಗನವಾಡಿ ಕೇಂದ್ರಕ್ಕೆ ಸ್ವಾಗತಿಸಿದ ಡಿಸಿ

eNEWS LAND Team