ಇಎನ್ಎಲ್ ಹುಬ್ಬಳ್ಳಿ:
ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಗೆಲುವು ನಿಶ್ಚಿತ. ಲಖನ್ ಕಾಂಗ್ರೆಸ್ ಪಕ್ಷದ ರೆಬೆಲ್ ಅಭ್ಯರ್ಥಿ. ಅವರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಹೇಳಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಾಂತೇಶ್ ಕವಟಗಿಮಠ ಅವರ ಗೆಲುವಿಗೆ ಬೆಳಗಾವಿಯಲ್ಲಿ ಎಲ್ಲ ಪ್ರಮುಖರನ್ನು ಭೇಟಿ ಮಾಡಿ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಬೇಕಾದ ಎಲ್ಲ ತ್ರ ತಂತ್ರಗಾರಿಕೆ ಗಳನ್ನು ರೂಪಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ನಮ್ಮ ಪಕ್ಷದ ಅಭ್ಯರ್ಥಿ ಪರ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪಕ್ಷದ ಅಭ್ಯರ್ಥಿ ಕವಟಗಿಮಠ ಗೆಲುವಿಗೆ ಒತ್ತು ನೀಡಲು ಬೆಳಗಾವಿಗೆ ತೆರಳಿ ಸಂಸದರು, ಸಚಿವರು ಹಾಗೂ ಪಕ್ಷದ ಎಲ್ಲ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.