34 C
Hubli
ಏಪ್ರಿಲ್ 25, 2024
eNews Land
ಸುದ್ದಿ

ಇಂಚಲ-ಮರಕುಂಬಿ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ: ಸಚಿವ ಕೆ.ಎಸ್.ಈಶ್ವರಪ್ಪ

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮೀ. ಗ್ರಾಮೀಣ ರಸ್ತೆಯನ್ನು 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನ ಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಇಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮತಕ್ಷೇತ್ರದ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮಿ. ರಸ್ತೆಯು ಮಳೆಯಿಂದ ಹಾಳಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವದು ಸರಕಾರದ ಗಮನಕ್ಕೆ ಬಂದಿದ್ದು ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 1.65 ಕೋಟಿ ರೂ. ಅನುದಾನದ ಅವಶ್ಯಕತೆವಿರುತ್ತದೆ. 2020-21ನೇ ಸಾಲಿನಲ್ಲಿ ಲಿಂಕ್ ಡಾಕ್ಯೂಮೆಂಟರಡಿ 3 ಲಕ್ಷ ರೂ.ಗಳ ಮೊತ್ತದಲ್ಲಿ ಮೇಲಿನ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸಲಾಗಿದೆ. ಅಲ್ಲದೇ ಈ ಇಂಚಲ-ಮರಕುಂಬಿ ರಸ್ತೆ ಒಳಗೊಂಡಂತೆ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಅನುದಾನವನ್ನು ಒದಗಿಸುವಂತೆ ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಅನುದಾನ ಲಭ್ಯವಾದ ನಂತರ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ತಿಳಿಸಿದರು.

Related posts

6000 ಸಿ.ಎಸ್.ಸಿ ಕೇಂದ್ರಗಳ ಸ್ಥಾಪನೆ: ಎಲ್.ಎಚ್.ಮಂಜುನಾಥ

eNEWS LAND Team

ಡಿ. 17,18ರಂದು ಅಮೃತೇಶ್ವರ ಜಾತ್ರೆ‌

eNewsLand Team

ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವರನ್ನು ಗಲ್ಲು ಹಾಕಿ ಎಂದು ಆಗ್ರಹ

eNEWS LAND Team