36 C
Hubli
ಏಪ್ರಿಲ್ 24, 2024
eNews Land
ಸುದ್ದಿ

ಹೊಸ ವರ್ಷಾಚರಣೆಗೆ ಕಡಿವಾಣ, ಕೋವಿಡ್ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ

ಇಎನ್ಎಲ್ ಮೈಸೂರು:

ಹೊಸ ವರ್ಷಚರಣೆ ಸಂಭ್ರಮಕ್ಕೆ ಕಡಿವಾಣ,
ಕೋವಿಡ್ ನೂತನ ಮಾರ್ಗಸೂಚಿ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಭಾನುವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಗಮನಿಸುತ್ತಿದ್ದರೆ ನಿಯಂತ್ರಣದಲ್ಲಿದೆ. ಇದಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಸಹ ನೈಟ್ ಕರ್ಫ್ಯೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 05 ಗಂಟೆಯವರೆಗೆ ಜಾರಿ ಮಾಡಲಾಗಿದೆ ಎಂದರು.

ಉದ್ಯಮಗಳ ನಷ್ಟ ತಪ್ಪಿಸಲು ಈ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಷ್ಕರಿಸಲಾಗುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಅಂತಹ ಯಾವ ಮರುಪರಿಷ್ಕರಣೆ ಮಾಡುವುದಿಲ್ಲ ಎಂದರು.

ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಉಪ ಆಯುಕ್ತರಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ, ಸೇರಿದಂತೆ ಇತರರು ಹಾಜರಿದ್ದರು.

Related posts

ಹಾವೇರಿ: ಜಾನುವಾರುಗಳಿಗೆ ಒಂದು ತಿಂಗಳ ಲಸಿಕಾ ಕಾರ್ಯಕ್ರಮ

eNEWS LAND Team

ಕರ್ನಾಟಕದಲ್ಲಿ ಕೊರೋನಾ ಬ್ಲಾಸ್ಟ್! ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ 

eNewsLand Team

ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ CHANGE IN PATTERN OF TRAIN SERVICES

eNewsLand Team