36.8 C
Hubli
ಮಾರ್ಚ್ 29, 2024
eNews Land
ಸುದ್ದಿ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಗೌರವ ಸಮರ್ಪಣೆ: ರೇಖಾ ಡೊಳ್ಳಿನವರ

ನರೇಗಾದಿಂದ ವಲಸೆಗೆ ಮುಕ್ತಿ: ಜಿ.ಪಂ.ಉಪಕಾರ್ಯದರ್ಶಿ ರೇಖಾ ಡೊಳ್ಳಿನವರ

ಇಎನ್ಎಲ್ ಹುಬ್ಬಳ್ಳಿ: ಉದ್ಯೋಗ ಖಾತ್ರಿ ಯೋಜನೆಯಿಂದ ಬಡ ಕುಟುಂಬದವರು ವಲಸೆ ಹೋಗುವುದು ತಪ್ಪಿದೆ. ಅವರ ಕುಟುಂಬ ನಿರ್ವಹಣೆಗೆ ಈ ಯೋಜನೆ ಆಸರೆಯಾಗಿದೆ ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನವರ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಮಾ.14 ರಂದು ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜ‌ನೆಯಡಿ ಸತತ 8 ವರ್ಷಗಳಿಂದ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಗೌರವ ಸಮರ್ಪಿಸುವ ‘ನವ ಭಾರತದ ನಾರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಮ್ಮಚಗಿ ಗ್ರಾಮದ 94 ಜನ ಕೂಲಿ ಕಾರ್ಮಿಕರು ಈ ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಖಾತೆಗೆ ರೂ. 299 ಹಣವನ್ನು ಜಮೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ್ ಮಾತನಾಡಿ, ಉಮಚಗಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೇ ಆರೋಗ್ಯ ತಪಾಸಣೆ ಶಿಬಿರವನ್ನು ಮಾಡಲಾಗುತ್ತಿದೆ. ಗ್ರಾಮವನ್ನು ಕ್ಷಯರೋಗ ಮುಕ್ತ ಗ್ರಾಮವನ್ನಾಗಿ ಮಾಡಲು ಕ್ಷಯರೋಗ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಗ್ರಾಮದ ಪಕ್ಕದ ಕೆರೆಯನ್ನು ಹೊಳೆತ್ತಲಾಗಿತ್ತು. ಈ ಬಾರಿ ಕೆರೆ ಹೂಳೆತ್ತುವ ಮೂಲಕ ಮಳೆಯ ನೀರನ್ನು ಸಂಗ್ರಹಿಸಲು ಅನುಕೂಲವಾಗಲಿದೆ. ಗ್ರಾಮದ ಜನರು ಮಳೆ ನೀರನ್ನೇ ಅವಲಂಬಿಸಿದ್ದಾರೆ. ಉದ್ಯೋಗದ ಜೊತೆಗೆ ಅವರ ಕೆರೆಯನ್ನು ಅವರೇ ಸ್ವಚ್ಛ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಇ ಶ್ರಮ್ ಕಾರ್ಡ್ ವಿತರಣೆ ಮಾಡಲಾಯಿತು. ಉದ್ಯೋಗ ವಾಹಿನಿ ವಾಹನಕ್ಕೆ ಚಾಲನೆ ನೀಡಲಾಯಿತು. ಕೂಲಿ ಕಾರ್ಮಿಕರು ನರೇಗಾ ಯೋಜನೆ ಬಗ್ಗೆ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ದೀಪಕ ಮಡಿವಾಳರ, ತಾಲೂಕು ಆರೋಗ್ಯಾಧಿಕಾರಿ ಆರ್.ಎಸ್.ಹಿತ್ತಲಮನಿ, ಗ್ರಾಮ ಪಂಚಾಯತ ಅಧ್ಯಕ್ಷ ಪ್ರವೀಣ ನಾಗರಳ್ಳಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ದಾವಲಸಾಬ ಪಿಂಜಾರ, ಅಧಿಕಾರಿಗಳು, ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು, ಗ್ರಾಮಸ್ಥರು, ಇತರರು ಭಾಗವಹಿಸಿದ್ದರು.

Related posts

ಧಾರವಾಡದ ಕೋವಿಡ್ ಪಾಸಿಟಿವಿಟಿ ರೇಟ್ ಎಷ್ಟಿದೆ ಗೊತ್ತಾ?! !!

eNewsLand Team

ಏನಿದು ಟೆಂಪಲ್ ಟೂರಿಸಂ!? ಸಿಎಂ ಬೊಮ್ಮಾಯಿ ಹೇಳಿದ್ದೇನು?

eNewsLand Team

ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಆದ್ಯ ಕರ್ತವ್ಯವಾಗಿದೆ: ಬಿ.ಎನ್.ಹೊಸಮನಿ

eNEWS LAND Team