34 C
Hubli
ಮಾರ್ಚ್ 23, 2023
eNews Land
ಸುದ್ದಿ

ಯುವತಿಯರ ಕೆಣಕುವ ಮುನ್ನ ಹುಷಾರ್; ಧಾರವಾಡದಲ್ಲಿ ಏನಿದು ಓಬವ್ವ ಆತ್ಮರಕ್ಷಣಾ ಕಲೆ?

Listen to this article

ಇಎನ್ಎಲ್ ಧಾರವಾಡ: ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಕುರಿತು ತರಬೇತಿ ನೀಡುವ ‘ಓಬವ್ವ ಆತ್ಮ ರಕ್ಷಣಾ ಕಲೆ’ ಎಂಬ ಸರ್ಕಾರದ ನೂತನ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಫೆ. 7ರಂದು ಬೆಳಗ್ಗೆ 11-30 ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೌರವ ಉಪಸ್ಥಿತಿ ವಹಿಸುವರು. ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಉದ್ಘಾಟಿಸುವರು.

ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪಾಲ್ಗೊಳ್ಳುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ವಹಿಸುವರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ವತಿಯಿಂದ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಸಿ. ಲಾಬೂರಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ. ಸುಶೀಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಪಿ. ಕೃಷ್ಣಕಾಂತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ.   ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಅಧಿಕಾರಿ ಡಾ.ಎನ್.ಆರ್, ಪುರುಷೋತ್ತಮ ಮತ್ತು ಅಜ್ಜಪ್ಪ ಸೊಗಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧಾರವಾಡಕ್ಕೂ ಒಕ್ಕರಿಸಿದ ಒಮಿಕ್ರಾನ್ ! ಡಿಸಿಯೇನೋ ಯಾರೂ ಹೆದ್ರಬೇಡಿ ಅಂತಿದಾರೆ..! ಆದ್ರೆ??

eNewsLand Team

ನಿಮ್ಮದು ಕಳಂಕ ರಹಿತ ಸೇವೆ: ಸಿ.ಎಮ್.ನಿಂಬಣ್ಣವರ

eNEWS LAND Team

ಹರ್ ಘರ್ ತಿರಂಗಾ ಅಭಿಯಾನ: ಭಾರತೀಯರು ಒಂದು ಎಂಬ ಸಂದೇಶ ಸಾರಬೇಕು: ಸಿಎಂ ಬೊಮ್ಮಾಯಿ

eNEWS LAND Team