ಇಎನ್ಎಲ್ ಡೆಸ್ಕ್
ನವದೆಹಲಿ: ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡ ಸೇನಾ ಹೆಲಿಕಾಪ್ಟರನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ದೃಢಪಡಿಸಿವೆ.
ಅವರು ಪ್ರಯಾಣಿಸುತ್ತಿದ್ದ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್ ಬುಧವಾರಲ ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡಿತ್ತು. ಈ ವೇಳೆ ಹೆಲಿಕಾಪ್ಟರ್‌ನಲ್ಲಿದ್ದ ರಾವತ್ ಸೇರಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ, ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಇತರೆ 12 ಜನರು ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದೆ.
Indian Air Force announces the demise of CDS General Bipin Rawat along with 12 others in chopper crash pic.twitter.com/8Ebrz6OoQZ
— ANI (@ANI) December 8, 2021
ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್‌ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದ ರಾವತ್ ಹೊರಟಿದ್ದರು, ಈ ವೇಳೆ ಅವಘಡ ಸಂಭವಿಸಿದೆ.