35 C
Hubli
ಏಪ್ರಿಲ್ 19, 2024
eNews Land
ರಾಜ್ಯ ಸುದ್ದಿ

ರೆನ್ಯೂ ಪವರ್’ನಿಂದ ₹ 50ಸಾವಿರ ಕೋಟಿ ಹೂಡಿಕೆ ಒಪ್ಪಂದ –ಸಿಎಂ ಬೊಮ್ಮಾಯಿ

ಕರ್ನಾಟಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು

ಇಎನ್ಎಲ್ ದಾವೋಸ್

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಕರ್ನಾಟಕದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲು ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, 2 ಹಂತಗಳಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ.

ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ತಿಳಿಸಿದರು.

ರೆನ್ಯೂ ಪವರ್ ಪ್ರೈ.ಲಿ. ಸಂಸ್ಥೆ :ಭಾರತದಲ್ಲಿ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ. ಭಾರತದ 9 ರಾಜ್ಯಗಳಲ್ಲಿ 120 ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್ ಗಳನ್ನು ಸ್ಥಾಪಿಸಿದೆ. ಕರ್ನಾಟಕದಲ್ಲಿ ಈ ಸಂಸ್ಥೆಯು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ. ಸಂಸ್ಥೆಯು ಪ್ರಸ್ತುತ12 ಗೀಗಾವ್ಯಾಟ್ ನಷ್ಟು ಇಂಧನವನ್ನು ಉತ್ಪಾದಿಸುತ್ತಿದೆ.

ಮೆಗಾ ಡಾಟಾ ಸೆಂಟರ್: ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿ ಇ ಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದಲ್ಲದೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರೊಂದಿಗೆ ಹಾಗೂ ಜಾನ್ಸನ್ ಕಂಟ್ರೋಲ್ಸ್ ನ ಸಿ ಇ ಓ ಜಾರ್ಜ್ ಒಲಿವರ್ ಅವರೊಂದಿಗೆ ಕರ್ನಾಟಕದಲ್ಲಿನ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು .

Related posts

ಜನಸಂಖ್ಯೆ ನಿಯಂತ್ರಣ ಎಲ್ಲರ ಹೊಣೆ: ತಹಸೀಲ್ದಾರ ಅಮಾಸಿ

eNewsLand Team

ಚಕ್ಕಡಿ ರಸ್ತೆ ಅಭಿವೃದ್ಧಿಗೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ

eNewsLand Team

ಪುನೀತ್ ಪುತ್ಥಳಿ ಅನಾವರಣ ಮಾಡಿದ ಸಿಎಂ ಬೊಮ್ಮಾಯಿ

eNewsLand Team