27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ನದಿ ಜೋಡಣೆಲಿ ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು: ಬೊಮ್ಮಾಯಿ

ಇಎನ್ಎಲ್ ನವದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಸೋಮವಾರ ಮಾಧ್ಯಮದವರ ಜೊತೆಗೆ ಅವರು ಮಾತನಾಡಿದರು.

ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ಹೇಳಲಾಗಿದೆ. ಕರ್ನಾಟಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.
ದೆಹಲಿಯಲ್ಲಿ ಇಂದು ಸಂಸದರ ಸಭೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರಕ್ಕೆ ಸಂಬಂಧಿಸಿರುವ ಹಲವಾರು ಯೋಜನೆಗಳು ಚರ್ಚೆಯಾಗಲಿವೆ. ಕೇಂದ್ರ ಬಜೆಟ್ ಆಧರಿಸಿ ರಾಜ್ಯ ಬಜೆಟ್‍ನ್ನು ಪೂರಕವಾಗಿ ನಾವೆಷ್ಟು ಅಂದಾಜುಗಳನ್ನು ಮಾಡಬೇಕು ಎನ್ನುವ ಬಗ್ಗೆ ಚರ್ಚಿಸಲಾಗುವುದು ಎಂದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂಧನ ಸಚಿವರು, ರಕ್ಷಣ ಸಚಿವ ರಾಜ್‍ನಾಥ್ ಸಿಂಗ್ ಅವರನ್ನು ಭೇಟಿಯಾಗಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನಾಳೆಯೂ ದೆಹಲಿಯಲ್ಲಿಯೇ ಇರುವುದಾಗಿ ತಿಳಿಸಿದ ಅವರು ಜೆ.ಪಿ.ನಡ್ಡಾ ಹಾಗೂ ಅಮಿತ್ ಷಾ ಅವರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ. ಕೇಂದ್ರದ ನಾಯಕರು ಸಮಯ ನೀಡಿದಾಗ ಸಂಪುಟ ರಚನೆಗೆ ಸಂಬಂಧಿಸಿದ ವಿಷಯಗಳು ಚರ್ಚೆಗೆ ಬರಲಿವೆ ಎಂದರು.

Related posts

ನೈಋತ್ಯ ರೈಲ್ವೆಯಿಂದ ಬೆಂಕಿ ಅನಾಹುತಗಳನ್ನು ಕುರಿತು ಜಾಗೃತಿ ಆಯೋಜನೆ

eNEWS LAND Team

ಖಾಸಗಿ, ಸರ್ಕಾರಿ,ಅರೆ ಸರ್ಕಾರಿ ಉದ್ಯೋಗ ಕನ್ನಡಿಗರಿಗೇ : ಸಿಎಂ ಬೊಮ್ಮಾಯಿ

eNEWS LAND Team

ಹುಬ್ಬಳ್ಳಿಯಲ್ಲಿ ಬಡವ ರಾಸ್ಕಲ್ ಹವಾ!!

eNEWS LAND Team