ಇಎನ್ಎಲ್ ಹುಬ್ಬಳ್ಳಿ: ಕಲಾಪ ನಡೆಸಲು ಬಿಡದ ಕಾಂಗ್ರೆಸ್ ಧೋರಣೆ ಖಂಡಿಸಿ ಬಿಜೆಪಿಯಿಂದ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ಬಳಿಕ ವೃತ್ತದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಪ ಸದಸ್ಯ ಪ್ರದೀಪ್ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಸೇರಿ ಹಲವರು ಭಾಗಿಯಾಗಿದ್ದರು.