27 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಇಎನ್ಎಲ್ ಹಾವೇರಿ:  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್’ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 13 ದಿನಗಳ “ಸಿಸಿ ಟಿ.ವಿ ಕ್ಯಾಮೆರಾ ಇನ್ಷ್ಟಾಲೇಶನ್” ಮತ್ತು ಸರ್ವಿಸಿಂಗ್ ಹಾಗೂ 10 ದಿನಗಳ “ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಓದಿ:ಪಿಎಂ-ಕಿಸಾನ್ ಕರ್ನಾಟಕ:47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರು. ಬಿಡುಗಡೆ

ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್, ಯೋಗ ಹಾಗೂ ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತ ಮಾಹಿತಿ ತರಬೇತಿ ನೀಡಲಾಗುವುದು. ಈ ತರಬೇತಿಗಳು ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ.   ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನು ಓದಿ:ಲೌಡ್’ಸ್ಪೀಕರ್ ಆದೇಶ ಪಾಲಿಸದಿದ್ದರೆ ಗುಂಡು ಹೊಡೆಯುತ್ತೇನೆ : ಪ್ರಮೋದ್ ಮುತಾಲಿಕ್

  ತರಬೇತಿಗಳು ಜೂನ್ ತಿಂಗಳಿನಲ್ಲಿ ಪ್ರಾರಂಭವಾಗಲಿದ್ದು, ಆಸಕ್ತರು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಲು ಜೂನ್ 9 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್’ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಹಾಗೂ ಸಂಸ್ಥೆಯ ದೂ. 9483485489, 9482188780, 7204609646, 8951819260, 8197022501, 08284-295307, 220807 ಗೆ ಸಂಪರ್ಕಿಸಲು ಕೋರಲಾಗಿದೆ.

Related posts

ಗೌರಿ ಲಂಕೇಶ್ ಹತ್ಯೆ: ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

eNewsLand Team

ಮಾರ್ಕೆಟ್ ಓಪನಿಂಗ್ ಬೆಲ್

eNewsLand Team

ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್

eNEWS LAND Team