23.8 C
Hubli
ಮಾರ್ಚ್ 28, 2023
eNews Land
ಸುದ್ದಿ

ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

Listen to this article

ಇಎನ್ಎಲ್ ಹುಬ್ಬಳ್ಳಿ
ಪ್ರಸ್ತುತ ಶೈಕ್ಷಣಿಕ ವರ್ಷದ ಮೂರು ಮತ್ತು ಐದನೇ ಸೆಮಿಸ್ಟರ್ ಕಾನೂನು ತರಗತಿಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎನ್‌ಎಸ್ಯುಐ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ೨ನೇ ದಿನ ಪೂರೈಸಿದೆ.
ಮೊದಲ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಆಕ್ಟೋಬರನಲ್ಲಿ ಮುಗಿದು, ಈ ತಿಂಗಳಲ್ಲಿ ಮುಂದಿನ ತರಗತಿಗಳು ಆರಂಭವಾಗಬೇಕಿತ್ತು. ಆದರೆ, ವಿಶ್ವವಿದ್ಯಾಲಯ ಪರೀಕ್ಷೆ ನಡೆಸದೆ, ಮುಂದಿನ ಸೆಮಿಸ್ಟರ್ ತರಗತಿಯನ್ನೂ ನಡೆಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಬಾರ್ ಕೌನ್ಸಿಲ್ ಮಾರ್ಗಸೂಚಿಗಳನ್ನು ಅನುಸರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇಬೇಕು ಎಂದು ಕುಲಪತಿ ಡಾ. ಈಶ್ವರ ಭಟ್ ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು, ಯಾವುದೇ ಕಾರಣಕ್ಕೂ ಭೌತಿಕವಾಗಿ ಪರೀಕ್ಷೆ ನಡೆಸಬಾರದು. ಆನ್ಲೈನ್ ಅಥವಾ ಅಸೈನ್ಮೆಂಟ್ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.
ಕಾನೂನು ಇಲಾಖೆಯನ್ನು ಸಂಪರ್ಕಿಸಿ ಮುಂದಿನ ನಿರ್ಧಾರ ತಿಳಿಸುವುದಾಗಿ ಕುಲಪತಿ ಹೇಳಿದಾಗ, ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಹಿಂತೆಗೆದುಕೊಂಡರು. ಕುಲಪತಿಯಿಂದ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ ಮುಂದುವರಿಸಿ, ಕುಲಪತಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪೊಲೀಸರ ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನೂರಾರು ವಿದ್ಯಾರ್ಥಿಗಳು ಪಾಲ್ಗೊoಡಿದ್ದರು. ಈ ವೇಳೆ
ಸಂತೋಷ ನಂದೂರ, ಮಂಜುನಾಥ, ಶಂಕರ ಪಾಟೀಲ ಸೇರಿದಂತೆ ನೂರಾರು ವಿದ್ಯಾರ್ಥಿಗಳಿದ್ದರು.
ಪರೀಕ್ಷೆ ಕುರಿತು ಸರ್ವೇ ನಡೆಸಿದಾಗ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್ ಪರೀಕ್ಷೆ ಬೇಡ, ಭೌತಿಕ ಪರೀಕ್ಷೆ ನಡೆಸಿ ಎಂದು ಕೋರಿದ್ದಾರೆ. ನ್ಯಾಾಯಾಲಯವೂ ಪರೀಕ್ಷೆ ನಡೆಸಲು ನಿರ್ದೇಶನ ನೀಡಿದೆ. ಹೀಗಾಗಿ ಪರೀಕ್ಷೆ ನಡೆಸಬೇಕಿದೆ ಎಂದು
ಕೆಎಸ್‌ಎಲ್‌ಯು ಉಪಕುಲಪತಿ ಈಶ್ವರ ಭಟ್ ತಿಳಿಸಿದ್ದಾರೆ

Related posts

ಫ್ಯಾಷನ್‌ಯುಗ ಮಹಿಳೆಯರಿಗೆ ಪೂರಕ: ಭಾಗ್ಯಶ್ರೀ ಜಾಗೀರದಾರ

eNEWS LAND Team

ಯೋಗ ಮಾಡೋಕೆ ಮೈಸೂರಿಗೆ ಬರ್ತಾರೆ ಪ್ರಧಾನಿ ನರೇಂದ್ರ ಮೋದಿಜಿ!

eNewsLand Team

ಪರಿಸರ ರಕ್ಷಿಸೋಣ : ಟಿಎಂಸಿ ಮುಖ್ಯಾಧಿಕಾರಿ ಗದ್ದಿಗೌಡ್ರ

eNEWS LAND Team