ಇಎನ್ಎಲ್ ಸ್ಪೋರ್ಟ್ಸ್ ಡೆಸ್ಕ್
ಐಪಿಎಲ್ 15ನೇ ಸೀಸನ್ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್’ನ ಮಹೇಂದ್ರ ಸಿಂಗ್ ಧೋನಿ ಸ್ಫೋಟಕ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕ್ಯಾಪ್ಟನ್ಸಿ ತೊರೆದಿದ್ದಷ್ಟೇ ತಮ್ಮ ಲಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಚೆನ್ನ 67ರನ್’ಗೆ 5 ವಿಕೆಟ್ ಕಳೆದುಕೊಂಡು ವಿಷಮ ಪರಿಸ್ಥಿತಿಯಲ್ಲಿದ್ದಾಗ 7ನೇ ಕ್ರಮಾಂಕದಲ್ಲಿ ಕ್ರೀಸ್’ಗೆ ಬಂದ ಧೋನಿ ತಂಡಕ್ಕೆ ಬಲ ತುಂಬಿದ್ದಾರೆ..
38 ಬೌಲ್ ಎದುರಿಸಿದ ಮಾಹಿ, 131.58 ಸ್ಟ್ರೈಕ್ ರೇಟ್ ನೊಂದಿಗೆ ಅಬ್ಬರಿಸಿದರು. 7 ಬೌಂಡರಿ, 1 ಸಿಕ್ಸರ್ ಮೂಲಕ ತಮ್ಮ ಅರ್ಧಶತಕ ಪೂರೈಸಿದರು.
ನೂತನ ಕ್ಯಾಪ್ಟನ್ ರವೀಂದ್ರ ಜಡೇಜಾ ( ಮಾಜಿ ನಾಯಕನಿಗೆ ಸಾಥ್ ನೀಡಿದರು. ಅಂತಿಮವಾಗಿ ಸಿಎಸ್’ಕೆ 5 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದೆ.