23.8 C
Hubli
ಮಾರ್ಚ್ 28, 2023
eNews Land
ಸುದ್ದಿ

ಇಂದು ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Listen to this article

ಇಎನ್ಎಲ್ ಧಾರವಾಡ

ಇಂದು ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದು ನಿನ್ನೆ  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ನಾವು ಗಳಿಸಲಿದ್ದು,
ಇದರಿಂದ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ.
ಜನ ನಮಗೆ ಆಶೀರ್ವಾದ ಮಾಡ್ತಾರೆ ಅನ್ನೋ ವಿಶ್ವಾಸ ಇದೆ.
ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗಳು ಮತ್ತು ಹಲವು ತೀರ್ಮಾನಗಳು ಆಗ್ತಾವೆ.
ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರ.
ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ.
ನಮ್ಮ ಅಪೇಕ್ಷೆ ಸಹ ನಿಷೇಧ ಮಾಡೋದು ಇದೆ.
ಹಲವು ರಾಜ್ಯಗಳಲ್ಲಿ ಮತಾಂತರ ಕಾಯ್ದೆ ಜಾರಿ ಆಗಿದೆ.
ಮತಾಂತರ ನಿಷೇಧ ಕಾಯ್ದೆ ಇದೆ ಅಧಿವೇಶನದಲ್ಲಿ ಪಾಸ್ ಆಗಲಿದೆ.
ಅಧಿವೇಶನದ‌‌‌ ಮುಗಿಯುವ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿ ಆಗಲಿದೆ.
ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ.
ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ರಾಯರೆಡ್ಡಿ ಹೇಳಿಕೆ ವಿಚಾರ.
ಅದರಲ್ಲಿ ಸತ್ಯಾಂಶ ಇಲ್ಲ,ಎಲ್ಲ ರೀತಿಯ ಸಹಕಾರ ಸಿಗುತ್ತಿದೆ.
ಬಿಜೆಪಿಯಲ್ಲಿ ಅವರ ಅವಧಿಯನ್ನ ಬೊಮ್ಮಾಯಿ ಪೂರ್ಣಗೊಳಿಸುತ್ತಾರೆ ಎಂದರು‌.

Related posts

ರೈತರು ರಸ್ತೆ ಬಂದ್‌ಗೊಳಿಸಿ ಪ್ರತಿಭಟನೆ, ಬೆಳೆಹಾನಿ ಪರಿಹಾರಕ್ಕೆ ಆಗ್ರಹ!

eNEWS LAND Team

ಹುಬ್ಬಳ್ಳಿಲಿ ಡಿ.ಕೆ.ಶಿ, ಸಿದ್ದರಾಮಯ್ಯ ಸುಟ್ಟಿದ್ದು ಯಾಕೆ ಗೊತ್ತಾ?

eNEWS LAND Team

ಮಳೆಗಾಲ ಪೂರ್ವದಲ್ಲಿ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ; ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರವಿಕುಮಾರ ಸುರಪುರ

eNEWS LAND Team