26 C
Hubli
ಮೇ 25, 2024
eNews Land
ಸುದ್ದಿ

ಯೋಗ ಮಾಡೋಕೆ ಮೈಸೂರಿಗೆ ಬರ್ತಾರೆ ಪ್ರಧಾನಿ ನರೇಂದ್ರ ಮೋದಿಜಿ!

ಮೈಸೂರಿನಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

ಇಎನ್ಎಲ್ ಬೆಂಗಳೂರು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ 21 ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.

ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ತಮ್ಮ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.

Related posts

ಮೃತನ ತಾಯಿಗೆ ಸ್ವಿಮ್ಮಿಂಗ್ ಪೂಲ್ ಮಾಲೀಕರು ಮತ್ತು ವಿಮಾ ಕಂಪನಿಯಿಂದ ಪರಿಹಾರ ಕೊಡಲು ಆಯೋಗದ ಆದೇಶ.

eNewsLand Team

ಕಿಮ್ಸ್ ಆವರಣದಲ್ಲಿ 24X7 ಕೋವಿಡ್ ಸ್ವ್ಯಾಬ್ ಸಂಗ್ರಹ,ತಪಾಸಣೆ , ಸೋಂಕಿತರ ಭೌತಿಕ ಪರಿಶೀಲನೆ ಚಿಕಿತ್ಸೆ

eNEWS LAND Team

ಮೇ 10ರಂದು ವಿಧಾನಸಭೆ ಚುನಾವಣೆ

eNEWS LAND Team