28 C
Hubli
ಫೆಬ್ರವರಿ 3, 2023
eNews Land
ರಾಜಕೀಯ

ಜ.5ರಿಂದ ಜೆ.ಪಿ.ನಡ್ಡಾ ಅವರ ರಾಜ್ಯ ಪ್ರವಾಸ- ನಿರ್ಮಲ್‍ಕುಮಾರ್ ಸುರಾಣ

Listen to this article

ಇಎನ್ಎಲ್ ಬೆಂಗಳೂರು:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.

5ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಅವರು ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿಯ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸುವರು.
6ರಂದು ಬೆಳಿಗ್ಗೆ ಅವರು ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದು ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.

Related posts

ಮಹಾದಾಯಿ ವಿಚಾರ; ಯಡಿಯೂರಪ್ಪ ಕಾಲೆಳೆದ ಸಿದ್ದರಾಮಯ್ಯ

eNewsLand Team

ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

eNEWS LAND Team

ಅಸೆಂಬ್ಲಿಯಲ್ಲಿ ಬಿಜೆಪಿಗೆ ಬಹುಮತ ಖಚಿತ-ಬಿ.ಎಸ್.ಯಡಿಯೂರಪ್ಪ

eNewsLand Team