35 C
Hubli
ಮಾರ್ಚ್ 29, 2024
eNews Land
ರಾಜಕೀಯ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಆಯೋಗದ ವರದಿ ಸಲ್ಲಿಕೆ ಬಳಿಕ ಕ್ರಮ: ಸಿಎಂ

ಇಎನ್ಎಲ್ ಬೆಳಗಾವಿ

ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು.

ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Related posts

ಮಾನೆಗೆ ಮಣೆ ಹಾಕಿದ ಹಾನಗಲ್

eNEWS LAND Team

ಹುಬ್ಬಳ್ಳಿಲಿ 11 ವರ್ಷದ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಭೆಗೆ ಬಂದವರಿಗೆ ವಿಶೇಷ ಗಿಫ್ಟ್ ಸಿಗತ್ತೆ!!

eNewsLand Team

ಮುಖ್ಯಮಂತ್ರಿ ಬೊಮ್ಮಾಯಿ ಬಿಚ್ಚಿಟ್ಟ‌ ಮನದಾಳ ಮಾತೇನು? ಇಲ್ಲಿ ನೋಡಿ

eNewsLand Team