28.6 C
Hubli
ಏಪ್ರಿಲ್ 20, 2024
eNews Land
ರಾಜಕೀಯ

ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಸಹಾಯಧನ ಮಂಜೂರು ಕಾರ್ಮಿಕ ಸಚಿವ- ಶಿವರಾಂ ಹೆಬ್ಬಾರ

ಇಎನ್ಎಲ್ ಹಾವೇರಿ:

ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಕಿಟ್ ವಿತರಿಸಲಾಗಿದೆ. ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಹಾಗೂ ಹಾವೇರಿ ಜಿಲ್ಲೆಗೆ ರೂ.31 ಕೋಟಿ ಸಹಾಯಧನ ನೀಡಲಾಗಿದೆ ಎಂದು ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ ಅವರು ಹೇಳಿದರು.
ಹಿರೇಕೆರೂರು ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾರ್ಮಿಕ ಭವನದ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಹಾಗೂ ಕಾರ್ಮಿಕರು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಕಾರ್ಮಿಕರು ಮತ್ತು ಕೃಷಿಕರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಜೀವಿಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಸಚಿವ ಸಚಿವರಾದ ಆನಂದಸಿಂಗ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಇತರರು ಉಪಸ್ಥಿತರಿದ್ದರು

Related posts

ಪುನೀತ್ ಮನೆಗೆ ಸಿಎಂ ಭೇಟಿ

eNEWS LAND Team

ಕೇಂದ್ರ ಪಂಚಾಯತ್ ರಾಜ್ ಸಚಿವರಿಂದ ಮುಖ್ಯಮಂತ್ರಿಗಳ ಭೇಟಿ

eNEWS LAND Team

ಬಿಜೆಪಿ ಬಹುಮತದಿಂದ ಗೆಲ್ಲುವ ವಿಶ್ವಾಸ: ನಂದಿನಿ ಅಮೂಲಗೆ ಸವಾಲಾಗಲಿದೆ: ಸಿಎಂ ಬೊಮ್ಮಾಯಿ

eNEWS LAND Team