36 C
Hubli
ಏಪ್ರಿಲ್ 24, 2024
eNews Land
ಜಿಲ್ಲೆ

ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

ಇಎನ್ಎಲ್ ಹುಬ್ಬಳ್ಳಿ

ತಾಲೂಕಿನ ಶೆರೆವಾಡ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಶೆರೆವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯತ ಆರೋಗ್ಯ ಅಮೃತ ಅಭಿಯಾನದಲ್ಲಿ ಮಹಾತ್ಮ ಗಾಂಧಿ ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.

ಹಿರಿಯ ನಾಗರಿಕರು, ವಿಶೇಷ ಚೇತನರು ಮತ್ತು ಯುವಕರಿಗೆ ಪೌಷ್ಠಿಕ ಆಹಾರ ಹಾಗೂ ಮಾನಸಿಕ ಒತ್ತಡದ ಕುರಿತು ಅರಿವು ಮೂಡಿಸಲಾಯಿತು.

ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶಿವಾನಂದ್ ಉಳ್ಳಾಗಡ್ಡಿ, ಉಪಾಧ್ಯಕ್ಷರಾದ ಮಹಾದೇವಿ ಅಮಟೂರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಶ್ ಕುಂಬಾರ್, ಸದಸ್ಯರು, ಅಂಗನವಾಡಿ ಮೇಲ್ವಿಚಾರಕರಾದ ಜ್ಯೋತಿ ಸಣ್ಣಕ್ಕಿ, ಸಮುದಾಯದ ಆರೋಗ್ಯ ಅಧಿಕಾರಿಗಳು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಡಾ.ಬಿ.ಆರ್‌.ಅಂಬೇಡ್ಕರ್ ಅವರ ವಿದೇಶಾಂಗ ನೀತಿ ವಿಚಾರಗಳು ಕೃತಿ ಲೋಕಾರ್ಪಣೆ

eNewsLand Team

ಧಾರವಾಡ; ಫೆ. 8ರಂದು ಉದ್ಯೋಗ ಮೇಳ

eNewsLand Team

ವಿದ್ಯಾರ್ಥಿನಿಯರಲ್ಲಿ ದೈರ್ಯ ತುಂಬಲು ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ- ಜಿಲ್ಲಾಧಿಕಾರಿ 

eNewsLand Team