29 C
Hubli
ಸೆಪ್ಟೆಂಬರ್ 26, 2023
eNews Land
ಸಣ್ಣ ಸುದ್ದಿ

ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಇಎನ್ಎಲ್ ಹುಬ್ಬಳ್ಳಿ: ಮೇ. 23 ರಿಂದ ಜೂನ್ 3ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಕಲಘಟಗಿ ಹಾಗೂ ಅಳ್ನಾವರ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ

eNewsLand Team

ನಮ್ಮ ನಡೆ ಪ್ರಕೃತಿ ಕಡೆ ಜಾಥಾ

eNewsLand Team

₹1ಕೋಟಿ ಮೌಲ್ಯದ 400ಮೊಬೈಲ್ ಪತ್ತೆ ಮಾಡಿ ಸಾರ್ವಜನಿಕರಿಗೆ ತಲುಪಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸರು!!!

eNEWS LAND Team