ಇಎನ್ಎಲ್ ಹಾನಗಲ್: ದೇವಗಿರಿಯ ಬಾಪೂಜಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ಕೇಂದ್ರ ಸರ್ಕಾರದ ಅಟಲ್ ಟಿಂಕರಿಂಗ್ ಲ್ಯಾಬ್’ನ್ನು ಸಂಸದರಾದ ಶಿವಕುಮಾರ ಉದಾಸಿಯವರು ಉದ್ಘಾಟಿಸಿದರು.
ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾಜಿ ಶಾಸಕ ಶಿವರಾಜ ಸಜ್ಜನರ, ಹೇಮಾವತಿ ಶಿವರಾಜ ಸಜ್ಜನರ ಸೇರಿ ಅನೇಕ ಗಣ್ಯರು, ಲ್ಯಾಬ್ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ದೇಶದ ಶಿಕ್ಷಣ, ರಕ್ಷಣೆ, ಆರೋಗ್ಯ, ಆರ್ಥಿಕ ವ್ಯವಸ್ಥೆಗಳಿಗೆ ನರೇಂದ್ರ ಮೋದಿಯವರ ಸರ್ಕಾರ ನೀಡುತ್ತಿರುವ ಕೊಡುಗೆ ಅವಿಸ್ಮರಣೀಯ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು. ಇದೆ ಸಂದರ್ಭದಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯಿಂದ ಶಿವಕುಮಾರ ಉದಾಸಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.