ಇಎನ್ಎಲ್ ಧಾರವಾಡ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಆರಂಭವಾದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸನ್ಮಾನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮತ್ತು ಇತರೆ ನಾಯಕರು ಉಪಸ್ಥಿತರಿದ್ದರು.