ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಪ್ರವಾಸ
ಹುಬ್ಬಳ್ಳಿ ಅ .18:
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಕ್ಟೋಬರ್ 20 ರಂದು ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. 11.30 ಕ್ಕೆ ಹುಬ್ಬಳ್ಳಿಯ ಜೈನ್ ಬೋರ್ಡಿಂಗ್ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಕುಂದಗೋಳದಲ್ಲಿ ಏರ್ಪಡಿಸಿರುವ ಶಾದಿಮಹಲ್ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.