27 C
Hubli
ಮೇ 25, 2024
eNews Land
ಸಣ್ಣ ಸುದ್ದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಅಫ್ರೋಜ್ ಮಂಚನಕೊಪ್ಪ ಹಾಗೂ ಬೆಂಬಲಿಗರು!!

ಇಎನ್ಎಲ್ ಹುಬ್ಬಳ್ಳಿ: ಇಂದು ಮಾರ್ಚ್ 31 ರಂದು ಶುಕ್ರವಾರ ಸಂಜೆ 4-00 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಹುಬ್ಬಳ್ಳಿ ಪೂರ್ವ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಪ್ರಸಾದ ಅಬ್ಬಯ್ಯ ಹಾಗೂ ಹು.ಧಾ.ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಾನ್ಯ ಶ್ರೀ ಅಲ್ತಾಫಹುಸೇನ ಹಳ್ಳೂರ ಅವರ ನೇತೃತ್ವದಲ್ಲಿ, ರಾಜ್ಯ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಫ್ರೋಜ್ ಮಂಚನಕೊಪ್ಪ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷದ ತತ್ವ ಹಾಗೂ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕಾರಣ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ/ಕಿರಿಯ ಮುಖಂಡರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪಾಲಿಕೆಯ ಹಾಲಿ/ಮಾಜಿ ಸದಸ್ಯರು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಸಮಸ್ತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಕಟಣೆ ತಿಳಿಸಿದೆ.

Related posts

ಡಾ.ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ಸಂಗೀತಾಭ್ಯಾಸಕ್ಕೆ ಪ್ರವೇಶ ಫೆ.15 ಹಾಗೂ 16 ರಂದು ಆಡಿಷನ್

eNEWS LAND Team

ಖೊಟ್ಟಿ ಜಾತಿ ಪ್ರಮಾಣಪತ್ರ ಪಡೆಯುವವರ ಮೇಲೆ ಕ್ರಮ ತೆಗೆದುಕೊಳ್ಳಿ: ಶಿವು ಪೂಜಾರ

eNEWS LAND Team

ಕಾಮಸಮುದ್ರದಲ್ಲಿ ಭೂಮಿ ಪೂಜೆ ನೆರವೇರಿಸಿದ: ರಾಜಮ್ಮ

eNEWS LAND Team