28 C
Hubli
ಸೆಪ್ಟೆಂಬರ್ 21, 2023
eNews Land
ಸಣ್ಣ ಸುದ್ದಿ

ತಹಶೀಲ್ದಾರ ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಸಹಾಯ ಮಾಡಲು ಮುಂದಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

ಇಎನ್ಎಲ್ ಕಲಘಟಗಿ: ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಸಹಾಯ ಮಾಡಲು ಎಂದು ಹಾಗೂ ವಿನಾಕಾರಣ ಅಧಿಕಾರಿಗಳಿಂದ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಲು ಮತ್ತು ಹೆಚ್ಚುವರಿ ಹಣ ಕೇಳುವ ಅಧಿಕಾರಿಗಳನ್ನು ಎಚ್ಚರಿಸುವ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಡೀ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಅದರ ಭಾಗವಾಗಿ ಕಲಘಟಗಿ ತಹಸೀಲ್ದಾರ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷೆ ಸುಮಿತ್ರಾ ಹಳ್ಳಿಕೇರಿ ಉಪಾಧ್ಯಕ್ಷ ಜಹೀರ ಅಡ್ವಾಣಿ. ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂತೋಷ ಕರಗೂಳಿ, ಕಲಘಟಗಿ ತಾಲೂಕ ಅಧ್ಯಕ್ಷ ಮಂಜುನಾಥ ಗಂಜಿಗಟ್ಟಿ ತಾಲೂಕ ಯುವ ಘಟಕದ ಅಧ್ಯಕ್ಷ ಶ್ರೀಧರ ಹಾಗೂ ಪಕ್ಷದ ಇತರೆ ಪದಾಧಿಕಾರಿಗಳು ಇದ್ದರು.

Related posts

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

eNEWS LAND Team

ಬೆಳ್ಳಂಬೆಳಗ್ಗೆ ಮಹಾನಗರ ಪಾಲಿಕೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದೆ.

eNEWS LAND Team

ಭಂಡಿವಾಡ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ

eNEWS LAND Team