26.4 C
Hubli
ಮೇ 2, 2024
eNews Land
ಸಣ್ಣ ಸುದ್ದಿ

Reels (ವಿಡಿಯೋ) ಮಾಡಲು ಸ್ಪರ್ಧೆ!! ಇಲ್ಲಿದೆ ನೋಡಿ

ಇಎನ್ಎಲ್ ಧಾರವಾಡ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಿಗೆ ಮತದಾನ ಮತ್ತು ಚುನಾವಣೆಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ವೀಪ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ರೀಲ್ಸ್(ವಿಡಿಯೋ) ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತರ ಆಯ್ಕೆಗೆ ಮತ್ತು ಪ್ರಸ್ತುತ ಈ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಾಗೂ ಕೇಂದ್ರ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ. ಎಸ್.ಟಿ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ತಿಳಿಸಿದ್ದಾರೆ.

Related posts

ಡಿ.10 ರಂದು ಮದ್ಯ ಮಾರಾಟ ನಿಷೇಧ

eNEWS LAND Team

15 ರಿಂದ 18 ವರ್ಷದವರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ

eNEWS LAND Team

ಐ.ಟಿ.ಐ: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ

eNEWS LAND Team