ಇಎನ್ಎಲ್ ಧಾರವಾಡ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗ, ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆಸಕ್ತರು www.ssp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.bcwd.karnataka.gov.in ಮತ್ತು ದೂರವಾಣಿ ಸಂಖ್ಯೆ: 8050770004, 8050770005, 0836-2447961 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.