ಇಎನ್ಎಲ್ ಹುಬ್ಬಳ್ಳಿ: ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ ಕಚೇರಿಯಲ್ಲಿ ನಡೆದ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ,
ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಹೇಳಿದರು.
ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಲಾಗುವುದು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ ಹಾಗೂ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಜಿ.ವಿ.ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ಸಮಾಜದ ಮುಖಂಡರಾದ ಮನೋಹರ ಲಕ್ಕುಂಡಿ, ರಾಮಣ್ಣ ಬಡಿಗೇರ, ಗಂಗಾಧರ ಬಡಿಗೇರ, ಮಹೇಶ ಪತ್ತಾರ, ಮಾರುತಿ ಬಡಿಗೇರ, ಮೌನೇಶ ಬಡಿಗೇರ, ನಿಜಲಿಂಗಪ್ಪ ಪತ್ತಾರ, ಶಿವಾನಂದ ಬಡಿಗೇರ, ಮೌನೇಶ್ವರ ಅಕ್ಕಸಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.