ಶಿಕ್ಷಕರ ಮತಕ್ಷೇತ್ರದ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ
ಹುಬ್ಬಳ್ಳಿ ಅ.18:
ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಮೂನೆ-19 ರಲ್ಲಿ ಅರ್ಜಿ ಭರ್ತಿ ಮಾಡಿ 06-11-2021 ರೊಳಗಾಗಿ ನಗರದ ಸಹಾಯಕ ಮತದಾರರ ನೋದಣಾಧಿಕಾರಿಯಾದ ತಹಶೀಲ್ದಾರರಿಗೆ ಅಥವಾ ನಿಯೋಜಿತ ಅಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ www.ceokarnataka.kar.nic.in ನ್ನ ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.