37 C
Hubli
ಏಪ್ರಿಲ್ 26, 2024
eNews Land
ಆಧ್ಯಾತ್ಮಿಕ ಸುದ್ದಿ

ಪದ್ಮಶ್ರೀ ನಿರಾಕರಿಸಿದ್ದ ಸಿದ್ದೇಶ್ವರ ಸ್ವಾಮೀಜಿ

ಇಎನ್ಎಲ್ ಬೆಂಗಳೂರು: ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು.

ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, “ಅವರು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು,” ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳುತ್ತಾರೆ

Related posts

ಇಂದು ಬಿಎಫ್‌ಸಿ ನಾರ್ತ್ ಈಸ್ಟ್ ಯುನೈಟೆಡ್ ಹಣಾಹಣಿ

eNewsLand Team

ಇಎನ್ಎಲ್ ದಿನ ಪಂಚಾಂಗ

eNewsLand Team

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬೊಮ್ಮಾಯಿ

eNEWS LAND Team