ಡಬ್ಲ್ಯುಬಿಬಿಎಲ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಭಾಜನರಾದ ಹರ್ಮನ್‌ಪ್ರೀತ್ ಕೌರ್
ಇಎನ್ಎಲ್ ಸ್ಪೋರ್ಟ್ಸ್ ಕ್ಲಬ್
ವುಮೆನ್ ಬಿಗ್ ಬ್ಯಾಷ್ ಲೀಗ್ (WBBL) ಪ್ರಸಕ್ತ ಋತುವಿನಲ್ಲಿ ಟೂರ್ನಮೆಂಟ್ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಭಾರತ ಮಹಿಳಾ ಟಿ20 ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೊತಗೆ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಪರ ಆಡುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. WBBL ನ ಪ್ರಸಕ್ತ ಋತುವಿನಲ್ಲಿ ಅವರು ಟೂರ್ನಮೆಂಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಇವರು. 2021 ರ ಋತುವಿನಲ್ಲಿ, ಹರ್ಮನ್ ಪ್ರೀತ್ 66.50 ರ ಸರಾಸರಿಯಲ್ಲಿ 399 ರನ್‌ಗಳನ್ನು ಗಳಿಸಿದರು. ಬ್ಯಾಟ್ ಮಾತ್ರವಲ್ಲದೆ ಚೆಂಡಿನಲ್ಲೂ ಅದ್ಭುತ ಸಾಧನೆ ಮಾಡಿರುವ ಈ ಆಟಗಾರ್ತಿ 20.40ರ ಸರಾಸರಿಯಲ್ಲಿ 15 ವಿಕೆಟ್ ಪಡೆದಿದ್ದಾರೆ.