29 C
Hubli
ಸೆಪ್ಟೆಂಬರ್ 26, 2023
eNews Land
ಕ್ರೀಡೆ

ಟಿ-20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

ಕೋಚ್ ರಾಹುಲ್ ದ್ರಾವಿಡ್ ಗೆ ಮೊದಲ ಸಿಹಿ.

ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

ಇಎನ್ಎಲ್ ಸ್ಪೋರ್ಟ್ಸ್ ಬ್ಯೂರೋ

ಟೀಂ ಇಂಡಿಯಾ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ  ಮೂರು ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ರೋಚಕ ಗೆಲವು ದಾಖಲಿಸಿದೆ. ಈ ಮೂಲಕ ಭಾರತ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರಿಗೆ ಮೊದಲ ಸಿಹಿ ದೊರೆತಿದೆ. ಜತೆಗೆ ಮೂರು ಚುಟುಕು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ನಾಯಕ ರೋಹಿತ್ ಶರ್ಮಾ (48) ಹಾಗೂ ಸೂರ್ಯಕುಮಾರ್ ಯಾದವ್ (62) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಗೆದ್ದ ಭಾರತ ಇತ್ತೀಚೆಗಷ್ಟೇ ಟಿ20 ವಿಶ್ವಕಪ್‌ನಲ್ಲಿ ಸೂಪರ್-12ರ ಹಂತದಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲೆಂಡ್ ತಂಡವು ಮಾರ್ಟಿನ್ ಗಪ್ಟಿಲ್ (70) ಹಾಗೂ ಮಾರ್ಕ್ ಚಾಪ್‌ಮನ್ (63) ಆಕರ್ಷಕ ಅರ್ಧಶತಕಗಳ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು.

ಬಳಿಕ ಗುರಿ ಬೆನ್ನತ್ತಿದ ಭಾರತ ರೋಹಿತ್, ಸೂರ್ಯಕುಮಾರ್ ಹಾಗೂ ರಿಷಭ್ ಪಂತ್ ಉಪಯುಕ್ತ ಆಟದ ನೆರವಿನಿಂದ ಇನ್ನೂ ಎರಡು ಎಸೆತಗಳು ಬಾಕಿ ಉಳಿದಿರುವಂತೆಯೇ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಆದರೆ ಇವರಿಬ್ಬರ ವಿಕೆಟ್ ಉರುಳುತ್ತಿದ್ದಂತೆ ಭಾರತದ ಬ್ಯಾಟಿಂಗ್ ಚುರುಕು ಕಳೆದುಕೊಂಡಿತು.

ಕೊನೆಯ ಓವರ್‌ಗಳಲ್ಲಿ ರನ್‌ ಗಳಿಸಲು ಭಾರತದ ಬ್ಯಾಟ್ಸ್‌ಮನ್ ಗಳು ಪರದಾಡಿದರು. ಶ್ರೇಯಸ್ ಅಯ್ಯರ್ 5 ರನ್‌ಗಳಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿದ್ರು. ಕೊನೆಯ ಓವರ್‌ನಲ್ಲಿ 10 ರನ್‌ಗಳ ಅವಶ್ಯಕತೆಯಿತ್ತು. ಚೊಚ್ಚಲ ಟಿ20 ಪಂದ್ಯವನ್ನಾಡಿದ ವೆಂಕಟೇಶ್ ಅಯ್ಯರ್ ಒಂದು ಬೌಂಡರಿ ದಾಖಲಿಸಿ ಭರವಸೆ ಮೂಡಿಸಿದರೂ ನಂತರದ ಎಸೆತದಲ್ಲಿ ರಿವರ್ಸ್ ಸ್ವೀಪ್ ಮಾಡಲು ಹೋಗಿ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಆದರೆ, ಅಂತಿಮವಾಗಿ ಕೊನೆಯ ಓವರ್ ಮುಕ್ತಾಯಕ್ಕೆ ಎರಡು ಬೌಲ್ ಬಾಕಿ ಇರುವಾಗ ಕ್ರೀಸ್‌ನಲ್ಲಿದ್ದ ರಿಷಭ್ ಪಂತ್ ಬೌಂಡರಿ ಸಿಡಿಸಿ ತಂಡಕ್ಕೆ ಗೆಲವು ತಂದುಕೊಟ್ಟರು.

Related posts

ಕಪ್‌ ಎತ್ತೋರು ಯಾರು?

eNEWS LAND Team

ಅಂತಾರಾಷ್ಟ್ರೀಯ ಟಿ20ಗೆ ಈಗ ಮಾರ್ಟಿನ್ ಗಪ್ಟಿಲ್ ಬಾಸ್!

eNewsLand Team

ಎಬಿಡಿ ನಿವೃತ್ತಿ ಘೋಷಣೆ: ಕೊಹ್ಲಿ ಭಾವುಕ ಸಂದೇಶ

eNewsLand Team