ಇಎನ್ಎಲ್ ಸ್ಪೋರ್ಟ್ಸ್ ಕ್ಲಬ್: ದೇಶದ ಪ್ರತಿಭಾನ್ವೇಷಣೆ ಮತ್ತು ಲಿಂಗ ಸಮಾನತೆಯ ಪ್ರತಿಪಾದನೆಗಾಗಿ ಭಾರತದ ಒಲಿಂಪಿಯನ್ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರಿಗೆ ವಿಶ್ವ ಅಥ್ಲೆಟಿಕ್ಸ್‌ನಿಂದ ವರ್ಷದ ಮಹಿಳೆ ಪ್ರಶಸ್ತಿಯ ಗೌರವ ಸಿಕ್ಕಿದೆ.
2003ರ ಆವೃತ್ತಿಯ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಲಾಂಗ್ ಜಂಪ್ ಕಂಚಿನೊಂದಿಗೆ ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾ ಪಟು ಎಂಬ ಖ್ಯಾತಿ ಹೊಮದಿರುವ ಅಂಜು ಅವರಿಗೆ ಬುಧವಾರ ಪ್ರಶಸ್ತಿ ಘೋಷಿಸಲಾಗಿದೆ.
‘ಅಂಜು ಬಾಬಿ ಜಾರ್ಜ್ ಅವರು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 2016ರಲ್ಲಿ ಅವರು ಯುವತಿಯರಿಗಾಗಿ ತರಬೇತಿ ಅಕಾಡೆಮಿಯನ್ನು ತೆರೆದಿದ್ದು, ಅಲ್ಲಿ ತರಬೇತಿ ಪಡೆದವರು ಈಗಾಗಲೇ ವಿಶ್ವ 20 ವರ್ಷದೊಳಗಿನವರ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದಿದ್ದಾರೆ’ ಎಂದು ವರ್ಲ್ಡ್ ಅಥ್ಲೆಟಿಕ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.