35 C
Hubli
ಮಾರ್ಚ್ 29, 2024
eNews Land
ರಾಜ್ಯ

ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ಕಡಿಮೆ ದರ ನಮೂದಿಸಿ ಅರ್ಹರಾದ ಗುತ್ತಿಗೆದಾರರಿಂದ ಹೆಚ್ಚುವರಿ ಸೆಕ್ಯೂರಿಟಿ ಡೆಪಾಸಿಟ್
ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಲೋಕೋಪಯೋಗಿ ಗುತ್ತಿಗೆ ಕಾಮಗಾರಿಗಳಲ್ಲಿ ಕಲ್ಪಿಸಲಾಗಿರುವ 50ಲಕ್ಷ ರೂ.ಗಳ ಮೀಸಲಾತಿಯು ರ್ಯಾಂಡಮೈಸೆಶನ್ ಮೂಲಕ ಸಮರ್ಪಕವಾಗಿ ಜಾರಿಯಲ್ಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಪರಿಷತ್‍ನಲ್ಲಿ ಸದಸ್ಯ ಆರ್.ಬಿ.ತಿಮ್ಮಾಪುರ ಅವರ ಪ್ರಶ್ನೆಗೆ ಉತ್ತರಿಸಿದರು.
ಇದಕ್ಕೆ ಸಂಬಂಧಿಸಿದಂತೆ ಇಲಾಖೆಯಲ್ಲಿ ಯಾವುದೇ ರೀತಿಯ ದೂರುಗಳು ಸ್ವಿಕೃತವಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಪಾಟೀಲ್ ಅವರು ರೂ.50ಲಕ್ಷದಿಂದವರೆಗಿನ ಟೆಂಡರ್ ಮೀಸಲಾತಿಯನ್ನು ರೂ.1 ಕೋಟಿವರೆಗೆ ವಿಸ್ತರಿಸುವ ಪ್ರಸ್ತಾವನೆ ಸರಕಾರದ ಮುಂದಿರುವುದಿಲ್ಲ ಎಂದು ಅವರು ತಿಳಿಸಿದರು.
*ಕಡಿಮೆ ದರ ನಮೂದಿಸಿ ಅರ್ಹರಾದ ಗುತ್ತಿಗೆದಾರರಿಂದ ಹೆಚ್ಚುವರಿ ಸೆಕ್ಯೂರಿಟಿ ಡೆಪಾಸಿಟ್:ತಾಂತ್ರಿಕವಾಗಿ ಅರ್ಹಗೊಂಡು ಅತಿಕಡಿಮೆ ದರಗಳನ್ನು ನಮೂಸಿದ ಗುತ್ತಿಗೆದಾರರಿಂದ ದರಪಟ್ಟಿ ದರಗಳಿಗಿಂತ ಕಡಿಮೆಯಿರುವ ಮೊತ್ತಕ್ಕೆ ಹೆಚ್ಚುವರಿ ಸೆಕ್ಯೂರಿಟಿ ಡೆಪಾಸಿಟ್ ಪಡೆದುಕೊಂಡು ಗುತ್ತಿಗೆ ಕರಾರನ್ನು ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಪಾಟೀಲ್ ಅವರು ಎನ್.ಅಪ್ಪಾಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.
ಈ ಗುತ್ತಿಗೆದಾರರು ವಿಶಿಷ್ಟ ವಿವರಣೆಯ ಹಾಗೂ ಗುತ್ತಿಗೆ ಕರಾರಿನ ನಿಯಮಾವಳಿಯಂತೆ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಿದ ನಂತರವಷ್ಟೇ ಹೆಚ್ಚುವರಿ ಸೆಕ್ಯೂರಿಟಿ ಡೆಪಾಸಿಟ್ ಮೊತ್ತವನ್ನು ಗುತ್ತಿಗೆದಾರರಿಗೆ ಹಿಂತುರಿಗಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕೆಲವು ಪ್ರಕರಣಗಳಲ್ಲಿ ಗುತ್ತಿಗೆದಾರರು ಶೇ.30ರವರೆಗೂ ಕಡಿಮೆ ಬಿಡ್ ಮಾಡಿರುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.
ಲೋಕೋಪಯೋಗಿ ಇಲಾಖೆಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಗುಣನಿಯಂತ್ರಣ ಮಾನದಂಡಗಳಿಗನುಸಾರವಾಗಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿ ಕಾಮಗಾರಿಯನ್ನು ಸಮರ್ಪಕವಾಗಿ ಉತ್ತಮ ಗುಣಮಟ್ಟದೊಂದಿಗೆ ನಿರ್ವಹಿಸಲಾಗುತ್ತದೆ. ಇದಕ್ಕಾಗಿ ಇಲಾಖೆಯಲ್ಲಿ ಮುಖ್ಯ ಎಂಜನಿಯರ್ ವೃಂದದ ಅಧಿಕಾರಿಯ ನೇತೃತ್ವದಲ್ಲಿ ಗುಣನಿಯಂತ್ರಣ ವಲಯ ಸ್ಥಾಪಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
*ಚಾಮುಂಡಿ ಬೆಟ್ಟದಲ್ಲಿ ರಸ್ತೆ ಮತ್ತು ಭೂಕುಸಿತ; ರೂ.996ಲಕ್ಷಗಳ ವೆಚ್ಚದಲ್ಲಿ ಪುನರ್ ನಿರ್ಮಾಣ ಕಾಮಗಾರಿ: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇತ್ತೀಚೆಗೆ ಮೂರು ಭಾರಿ ರಸ್ತೆ ಮತ್ತು ಭೂಕುಸಿತವಾಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಭೂ ಕುಸಿತ ಸಂಬಂಧ ಪರಿಶೀಲಿಸಲು ತಜ್ಞರ ಸಮಿತಿ ನೇಮಕ ಮಾಡಿರುವುದಿಲ್ಲ.ಅದಾಗ್ಯೂ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರಿಂದ ಪರಿಶೀಲಿಸಿ ವರದಿ ಪಡೆಯಲಾಗಿದೆ ಎಂದರು.
ಭೂ ಕುಸಿತ ತಡೆಗಟ್ಟಲು ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ವರದಿಯಂತೆ ರೇಇನ್ಪೋರ್ಸಡ್ ಅರ್ಥ್ ಸ್ಟೀಪೆನೆಡ್ ಸ್ಲೋಪ್ ಸ್ಟಚರ್ಸ್ ವಾಲ್ ನಿರ್ಮಾಣ ಮಾಡುವಂತೆ ಶಿಫಾರಸ್ಸು ಮಾಡಿದ್ದು, ಅದರಂತೆ ರಸ್ತೆ ದುರಸ್ತಿಗೊಳಿಸಲು ರೂ.996ಲಕ್ಷಗಳ ತಗಲಬಹುದೆಂದು ಅಂದಾಜಿಸಲಾಗಿದೆ. ಅದರನ್ವಯ ಪ್ರಸ್ತಾವನೆ ತಯಾರಿಸಿದ್ದು,ಪುನರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಕ್ರಮವಹಿಸಲಾಗುವುದು ಎಂದರು.
ಭಾರಿ ಮಳೆಯಿಂದ ಹಾಳಾದ ರಸ್ತೆ ಮತ್ತು ಸೇತುವೆಗಳ ದುರಸ್ತಿಗಾಗಿ ರೂ.310 ಕೋಟಿ ಹಂಚಿಕೆ ಮಾಡಲಾಗಿದೆ ಎಂದರು.

Related posts

ಚಂಬೆಳಕಲ್ಲಿ ಒಂದಾದ ಚನ್ನವೀರ ಕಣವಿ

eNewsLand Team

ಕನಕರ ತತ್ವ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನ : ಸಿಎಂ

eNewsLand Team

ಚೆನ್ನವೀರ ಕಣವಿ ಅಂತ್ಯಕ್ರಿಯೆ: ಚೆಂಬೆಳಕಿನ ಕವಿಗೆ ಕನ್ನಡದಲ್ಲಿ ಕವಾಯತಿನ ಮೂಲಕ ಅಂತಿಮ ಗೌರವ

eNewsLand Team