22 C
Hubli
ಏಪ್ರಿಲ್ 20, 2024
eNews Land
ಅಪರಾಧ ರಾಜ್ಯ

ಆಸಿಡ್ ದಾಳಿ; ಸಂತ್ರಸ್ತರಿಗೆ ನಿವೇಶನ/ ಮನೆನೀಡಲು ಆದೇಶ: ಸಿಎಂ ಬೊಮ್ಮಾಯಿ

ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರು. ವರೆಗೆ ನೆರವು

ಇಎನ್ಎಲ್ ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರು. ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ ಲೋಕಾರ್ಪಣೆ ಮಾಡಿ ಮಾತನಾಡಿದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರುಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Related posts

ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

eNEWS LAND Team

A separate authority for the management of Bengaluru traffic density: CM Bommai

eNEWS LAND Team

ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

eNewsLand Team