ಇಎನ್ಎಲ್ ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘ ಆಯೋಜಿಸಿದ್ದ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ ಹಾಗೂ ಗಂಧದ ಗುಡಿ ಉದ್ಯಾನವನವನ್ನು ಉದ್ಘಾಟಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಮುನಿರತ್ನ, ವಿ ಸುನಿಲ್ ಕುಮಾರ್, ಸಂಸದ ಪಿಸಿ ಮೋಹನ್, ರಾಘವೇಂದ್ರ ರಾಜಕುಮಾರ್, ತಾರಾ, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.