34 C
Hubli
ಮಾರ್ಚ್ 23, 2023
eNews Land
ರಾಜಕೀಯ ರಾಜ್ಯ

ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

Listen to this article

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಗಳು ಅಧಿಕಾರಿಗಳಿಗೆ ನೀಡಿದ ಸಲಹೆ, ಸೂಚನೆ ಹಾಗೂ ಸಭೆಯ ಮುಖ್ಯಾಂಶಗಳು ಇಂತಿವೆ.

ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದರು.

ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣ ಗೊಳಿಸಲು ಸೂಚಿಸಿದರು. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆ. ಇದಕ್ಕೆ 15.40 ಕಿ. ಮೀ. ಮಾರ್ಗ ನಿರ್ಮಾಣಕ್ಕೆ ಕೆ ಐ ಎ ಡಿ ಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ಕೆ 100 ವಾಟರ್ ವೇ ಯೋಜನೆಯಡಿ 11 ಕಿ. ಮೀ. ರಾಜಕಾಲುವೆ ಯನ್ನು ಪ್ರೇಕ್ಷಣೀಯ ಸ್ಥಳ ವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಜನವರಿ ಅಂತ್ಯದ ವೇಳೆಗೆ ಪೂರ್ಣ ಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವು ಗೊಳಿಸಿ ಹಸಿರು ಬೇಲಿ (Green fencing) ಹಾಕುವಂತೆ ಸೂಚಿಸಿದರು.ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ಸೂಚಿಸಿದರು.

Related posts

ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

eNEWS LAND Team

ಹಿಜಾಬ್: ಕಾಂಗ್ರೆಸ್ ಬಗ್ಗೆ ಪ್ರಹ್ಲಾದ ಜೋಶಿ ಹೇಳಿದ್ದೇನು ಗೊತ್ತಾ?

eNewsLand Team

ರೆನ್ಯೂ ಪವರ್’ನಿಂದ ₹ 50ಸಾವಿರ ಕೋಟಿ ಹೂಡಿಕೆ ಒಪ್ಪಂದ –ಸಿಎಂ ಬೊಮ್ಮಾಯಿ

eNewsLand Team