27 C
Hubli
ಡಿಸೆಂಬರ್ 7, 2023
eNews Land
ರಾಜ್ಯ

ಗಡ್ಕರಿಯಿಂದ ಬೆಂಗಳೂರು ಮೈಸೂರು ಎಕ್ಸ್’ಪ್ರೆಸ್ ವೇ ವೈಮಾನಿಕ ಸಮೀಕ್ಷೆ ಇಂದು

ಇಎನ್ಎಲ್  ಬೆಂಗಳೂರು:

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ಈ ಬಾರಿಯ ವಿಧಾನಸಭಾ ಚುನಾವಣೆಗೂ ಮೊದಲು ಉದ್ಘಾಟನೆ ಮಾಡಲು ಸಿದ್ಧತೆಗಳು ನಡೆದಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು (ಜನವರಿ 5) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಎಕ್ಸ್​ಪ್ರೆಸ್​ ವೇಯ ವೈಮಾನಿಕ ತಪಾಸಣೆ ನಡೆಸಲಿದ್ದಾರೆ.

ಈಗಾಗಲೇ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ.

4,473 ಕೋಟಿ ರು. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಈ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್‌ಪ್ರೆಸ್‌ವೇ ಈ ಮಾರ್ಗದಲ್ಲಿ ಅಪಘಾತಗಳ ಸಂಖ್ಯೆಗೆ ಸುದ್ದಿಯಾಗಿದೆ. ಪೊಲೀಸ್ ಇಲಾಖೆಯ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ 6 ತಿಂಗಳಲ್ಲಿ 77 ಅಪಘಾತಗಳು ಉಂಟಾಗಿವೆ. ಈ ಅಪಘಾತಗಳಲ್ಲಿ ಒಟ್ಟು 28 ಜನರು ಪ್ರಾಣ ಕಳೆದುಕೊಂಡಿದ್ದು, 67 ಜನರು ಗಾಯಗೊಂಡಿದ್ದಾರೆ.

ಆದರೆ, NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಬಹುತೇಕ ರಸ್ತೆಗಳು ಜನವರಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದ್ದು, ಮುಂದಿನ ವರ್ಷ ಮಾರ್ಚ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. ಎನ್‌ಎಚ್‌ಎಐ ಅಧಿಕಾರಿಗಗಳು ಹೇಳುವಂತೆ ಎಕ್ಸ್‌ಪ್ರೆಸ್‌ವೇಯಲ್ಲಿ 16 ಅಪಘಾತ ವಲಯಗಳಿದೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಯು ಈ 262 ಕಿಮೀ ವಿಸ್ತಾರವು ಬೆಂಗಳೂರು ರಿಂಗ್ ರಸ್ತೆಯನ್ನು ಚೆನ್ನೈ ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುತ್ತದೆ.

Related posts

ಜ.21 ದಾಸೋಹ ದಿನಾಚರಣೆ

eNEWS LAND Team

ಒಮಿಕ್ರೋನ್ ತಡೆಗೆ 16 ಸೂತ್ರ: ಸಿಎಂ ಬೊಮ್ಮಾಯಿ‌ ಹೇಳಿದ್ದೇನು ಗೊತ್ತಾ?

eNEWS LAND Team

ಜಮೀರ್ ಬಸ್ ಒರೆಸಿಕೊಂಡು ಇದ್ದ, ಶಾಸಕನಾಗಿ ಮಾಡಿದ್ದು ಹೆಚ್ಡಿಕೆ….

eNEWS LAND Team