27 C
Hubli
ಮಾರ್ಚ್ 28, 2023
eNews Land
ರಾಜ್ಯ

ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಬಗ್ಗೆ ಕುರಿತು ಸಚಿವರಿಂದ ಸಕಾರಾತ್ಮಕ ಸ್ಪಂದನೆ

Listen to this article

ಇಎನ್ಎಲ್ ನವದೆಹಲಿ: ಡಿ. 6ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 2ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಪ್ರಕಟಣೆ ಮಾಡಿ, ಟ್ರಿಬ್ಯುನಲ್‌ನ ಸಂಪೂರ್ಣ ವರದಿಯ ನಂತರ ಸುಪ್ರೀಂ ಕೋರ್ಟ್ನ ತೀರ್ಪಿನ ಪರಿಪಾಲನೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರದಿಂದ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದರು.

ಗೋದಾವರಿ , ಕಾವೇರಿ, ಕೃಷ್ಣಾ ಮಹಾನದಿ ಲಿಂಕ್ ಬಗ್ಗೆ ರಾಜ್ಯದ ಅಹವಾಲನ್ನು ಕೇಳದೇ ಡಿಪಿಆರ್ ಮಾಡಬಾರದು ಹಾಗೂ ರಾಜ್ಯದ ನೀರಿನ ಪಾಲು ಎಷ್ಟು ಎಂಬುದು ನಿಗದಿ ಆಗುವ ವರೆಗೆ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಬಾರದು ಎನ್ನುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

Related posts

ಅಂತಾರಾಷ್ಟ್ರೀಯ ಮಟ್ಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಣ ಮೇಲ್ದರ್ಜೆಗೆ : ಕೇಂದ್ರ ಸಚಿವ ಜೋಶಿ

eNewsLand Team

ಕೊಡಗು ಜಿಲ್ಲೆ ಪಹಣಿಯಲ್ಲಿ ಬಹುವಾರ್ಷಿಕ ಬೆಳೆ ನಮೂದಿಸಲು ಕ್ರಮ

eNEWS LAND Team

ರಾಜ್ಯೋತ್ಸವ ಪ್ರಶಸ್ತಿಗೆ 6ಸಾವಿರಕ್ಕೂ ಹೆಚ್ಚು ಅರ್ಜಿ

eNEWS LAND Team