17 C
Hubli
ಡಿಸೆಂಬರ್ 7, 2022
eNews Land
ರಾಜಕೀಯ ರಾಜ್ಯ ಸುದ್ದಿ

ರಸ್ತೆ ಮಧ್ಯ ಹೋಮ ಮಾಡಿ ಬಿಜೆಪಿ ಮಾನ ಹರಾಜು ಹಾಕಿದ ಕಾಂಗ್ರೆಸ್!!

Listen to this article

 ಇಎನ್ಎಲ್ ಧಾರವಾಡ: ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಒಂದು ದಿನ ಇರುವಾಗ ಹುಬ್ಬಳ್ಳಿ-ಧಾರವಾಡ ಮಹಾನಗರದ ರಸ್ತೆ ದುರವಸ್ಥೆ , ಧೂಳು, ಹೊಂಡಾಗುಂಡಿ ಬಗ್ಗೆ ಆಡಳಿತಾರೂಢ ಬಿಜೆಪಿ ನಿರ್ಲಕ್ಷ್ಯ ಖಂಡಿಸಿ ಕಾಂಗ್ರೆಸ್ ರಸ್ತೆ ಮಧ್ಯದಲ್ಲಿಯೇ ಗಣ ಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿತು.

ಹೌದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯಾತಿಗಣ್ಯರು ಕಾರ್ಯಕಾರಿಣಿ ಸಭೆಗೆ ಹುಬ್ಬಳ್ಳಿಗೆ ಬರುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಬಿಜೆಪಿಗರ ಗಮನ ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ತಮ್ಮ ಮನೆಯ ಕಾರ್ಯಕ್ರಮ, ಪಕ್ಷದ ಕಾರ್ಯಕ್ರಮ ಇದ್ದಾಗ ಮಾತ್ರ ನಗರದ ಸ್ವಚ್ಛತಾ ಕಾರ್ಯ, ಸೌಂದರ್ಯಿಕರಣ ಕಾರ್ಯ ನೆನಪಾಗುತ್ತದೆ. ಉಳಿದ ದಿನಗಳಲ್ಲಿ ನಗರದ ಕಾಳಜಿ ನೆನಪಾಗುವುದಿಲ್ಲವೇ ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡಿದರು.

ಸೋಮವಾರ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಬಿಜೆಪಿ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಬ್ಬರು ಅರ್ಚಕರ ಮೂಲಕ ಶಾಸ್ತ್ರೋಕ್ತವಾಗಿ ಮಂತ್ರ ಪಠಣ ಮಾಡಿಸಿ ಗಣಹೋಮ ನೆರವೆರಸಿದ ಕಾಂಗ್ರೆಸ್ ಕಾರ್ಯಕರ್ತರು, ಕಳೆದು ಎರಡು ವರ್ಷದಿಂದ ಹದಗೆಟ್ಟ ಹುಬ್ಬಳ್ಳಿ-ಧಾರವಾಡ ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು ಸೇರಿದಂತೆ ಹಲವರು ಇದ್ದರು.

Related posts

ಗುಡಗೇರಿಗೆ ಭೇಟಿ ನೀಡಿದ ಶಾಸಕಿ ಕುಸುಮಾವತಿ

eNEWS LAND Team

ಹಿಜಾಬ್ ವಿವಾದ ತಣ್ಣಗಾಗಿಸಲು ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ

eNewsLand Team

ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

eNEWS LAND Team