21 C
Hubli
ನವೆಂಬರ್ 12, 2024
eNews Land
ರಾಜ್ಯ

ಉಪಚುನಾವಣೆ: ಅ.17 ರಿಂದ ಹಾನಗಲ್ ನಲ್ಲಿ ಪ್ರಚಾರ ಸಿ.ಎಂ

 

  • *ಉಪಚುನಾವಣೆ: ಅ.17 ರಿಂದ ಹಾನಗಲ್ ನಲ್ಲಿ ಪ್ರಚಾರ* *ಸಿ.ಎಂ

ಇಎನ್ಎಲ್ ಬೆಂಗಳೂರು, ಅ. 15

ಉಪಚುನಾವಣೆ ಪ್ರಯುಕ್ತ ಅಕ್ಟೋಬರ್ 17 ರಿಂದ ಹಾನಗಲ್ ತೆರಳಿ ಪ್ರಚಾರ ಕೈಗೊಳ್ಳಲಾಗುವುದು ನಂತರ ಸಿಂಧಗಿಯಲ್ಲಿ 2 ದಿನಗಳ ಪ್ರಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾವೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 21 ರ ನಂತರ ಹಾನಗಲ್ ಮತ್ತು ಸಿಂಧಗಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ಮಾಸಾಲಾ ಜಯರಾಂ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರು ಒಳ್ಳೆಯ ಸ್ನೇಹಿತರು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ತಮ್ಮನ್ನು ಭೇಟಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿಗಳು ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.

Related posts

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

eNewsLand Team

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ

eNEWS LAND Team

2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಾಧ್ಯತೆ

eNEWS LAND Team